ವರದಿ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.12 : ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರ ಅಕ್ಟೋಬರ್ 14 ಮತ್ತು 15 ರಂದು ದೊಡ್ಡಬಳ್ಳಾಪುರದ ಸ್ಕೌಟ್ ಕ್ಯಾಂಪ್ ಬೆಸೆಂಟ್ ಪಾರ್ಕ್‍ನಲ್ಲಿ ನಡೆಯಲಿದೆ.
ಅಕ್ಟೋಬರ್ 14 ರಂದು ಬೆಳಿಗ್ಗೆ 9-30 ಕ್ಕೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಗೌರವಾಧ್ಯಕ್ಷ ಡಾ.ಎ.ಎಸ್.ಕಿರಣ್‍ಕುಮಾರ್ ಶಿಬಿರ ಉದ್ಗಾಟಿಸಲಿದ್ದಾರೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ವಿಜ್ಞಾನ ಗ್ರಾಮ ನೀಲನಕ್ಷೆ ಉದ್ಗಾಟಿಸುವರು.
ನನ್ನೊಳಗಿನ ನಾನು, ಪರಿಷತ್ತು ಧ್ಯೇಯ ಬೆಳವಣಿಗೆ ಮತ್ತು ಉತ್ಸಾಹ-ಯಶಸ್ಸು, ಕಾಯಕದ ಪ್ರಸ್ತುತತೆ, ಪರಿಷತ್ತಿನ ಮುಂದಿನ ಗುರಿ-ಬಲವರ್ಧನೆ, ಅಮೃತಾ ಅಮಾವಾಸ್ಯೆ, ಸಮೂಹ ಮಾಧ್ಯಮ ಚಿತ್ತ-ಎತ್ತ, ನಾನೂ ಮಹಿಳೆ ನನ್ನ ನಡಿಗೆ ಎತ್ತ ವಿಚಾರಗೋಷ್ಠಿ ನಡೆಯಲಿದೆ. ಸಂಜೆ ನಾಲ್ಕು ಗಂಟೆಗೆ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಮಾತನಾಡುವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಪ್ರಶಸ್ತಿ ಪತ್ರ ವಿತರಿಸುವರು.
ಡಾ.ಸೋಮಶೇಖರ್ ಎಂ.ವಿ. ನೆನಪಿನ ಕಾಣಿಕೆ ವಿತರಿಸಲಿದ್ದಾರೆ.
ಚಿತ್ರದುರ್ಗ ಜಿಲ್ಲೆಯಿಂದ ಹನ್ನೆರಡು ಜನ ಶಿಬಿರದಲ್ಲಿ ಭಾಗವಹಿಸಲಿದ್ದಾರೆಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಜಿಲ್ಲಾಧ್ಯಕ್ಷ ನಾಗರಾಜ್ ಸಂಗಂ, ಉಪಾಧ್ಯಕ್ಷ ಕಿರಣ್‍ಶಂಕರ್, ಕಾರ್ಯದರ್ಶಿ ಪಿ.ಲೋಕೇಶ್, ಸಂಘಟನಾ ಕಾರ್ಯದರ್ಶಿ ಎಂ.ರಂಗಪ್ಪ, ಖಜಾಂಚಿ ಬಸಣ್ಣ ಇವರುಗಳು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…