Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಲ್ಲಾಡಿಹಳ್ಳಿಯಲ್ಲಿ ಮಾ.10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಮಟ್ಟದ ಸರ್ವ ಸದಸ್ಯರ ಸಭೆ

---Advertisement---

ಸುದ್ದಿಒನ್, ಚಳ್ಳಕೆರೆ, ಮಾರ್ಚ್.08 : ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯಲ್ಲಿ ಮಾ.10 ಭಾನುವಾರದಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಿಟಿ ವೀರಭದ್ರ ಸ್ವಾಮಿ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಅಂದು ರಾಜ್ಯದ ವಿವಿಧ ಜಿಲ್ಲೆಗಳಿಂದ ಪರಿಷತ್ತಿನ ಸರ್ವ ಸದಸ್ಯರು ಆಗಮಿಸಲಿದ್ದು ತಾಲೂಕಿನಲ್ಲಿಪರಿಷತ್ತಿನ ಆಜೀವ ಸದಸ್ಯತ್ವ ಪಡೆದ ಸದಸ್ಯರು ಸಭೆಗೆ ಹಾಜರಾಗಲು ಇಚ್ಚಿಸಿದ್ದಲ್ಲಿ ತಾಲೂಕು ಕಸಪ್ಪ ವತಿಯಿಂದ ವಾಹನವನ್ನು ಏರ್ಪಡಿಸಲು ತೀರ್ಮಾನಿಸಿದ್ದು ಶನಿವಾರದೊಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಲ್ಲಿ ಕಳುಹಿಸಿಕೊಡುವ ಏರ್ಪಾಡು ಮಾಡಲಾಗುವುದು ಎಂದು ತಿಳಿಸಿದರು ಹೆಚ್ಚಿನ ಮಾಹಿತಿಗಾಗಿ ಕಸಾಪ ಅಧ್ಯಕ್ಷರಾದ ಜಿ ಟಿ ವೀರಭದ್ರ ಸ್ವಾಮಿಯವರ ದೂರವಾಣಿ ಸಂಖ್ಯೆ 8050311363ಗೆ ಸಂಪರ್ಕಿಸಲು ಕೋರಿದ್ದಾರೆ.

ಇದೇ ಸಂದರ್ಭದಲ್ಲಿ ಶಾಸಕ ಟಿ ರಘುಮೂರ್ತಿಯವರಿಗೆ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಅನುದಾನಿತ ಶಾಲೆಗಳ ನೌಕರರ ಸಂಘ ವತಿಯಿಂದ ಶನಿವಾರ 11:00 ಗಂಟೆಗೆ ರೋಟರಿ ಬಾಲ ಭವನದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ದಯಾನಂದ ಡಿ ಈರಣ್ಣ ಶಿವಮೂರ್ತಿ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment