Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ನಾಳೆ ರಾಜ್ಯಮಟ್ಟದ ಕವಿಗೋಷ್ಠಿ: ಕವನ ವಾಚನ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 14 : ಕಸಾಪ ವತಿಯಿಂದ ರಾಜ್ಯಮಟ್ಟದ ಕವಿಗೋಷ್ಠಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಾಳೆ (ನವೆಂಬರ್. 15, ಭಾನುವಾರ) ಬೆಳಗ್ಗೆ 10.30 ಕ್ಕೆ ರೋಟರಿ ಕ್ಲಬ್ ನಲ್ಲಿ ರಾಜ್ಯ ಮಟ್ಟದ ಕವಿಗೋಷ್ಠಿ ಜರುಗಲಿದೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಈ ಕವಿಗೋಷ್ಠಿ ಆಯೋಜಿಸಲಾಗಿದೆ. ಬೆಳಗಾವಿ,ಮೈಸೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಒಟ್ಟಾರೆ 126 ಕವಿಗಳು ತಮ್ಮ ಕವನಗಳನ್ನು ಕಳಿಸಿದ್ದಾರೆ. ಇವುಗಳಲ್ಲಿ 52 ಕವನಗಳನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಕವಿಗಳು ತಮ್ಮ ಕವನಗಳನ್ನು ವಾಚಿಸಲಿದ್ದಾರೆ.
ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ನಿವೃತ್ತ ಪ್ರಾಚಾರ್ಯ ಡಾ.ಕರಿಯಪ್ಪ ಮಾಳಿಗೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ರೋಟರಿ ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ, ರೋಟರಿ ಕಾರ್ಯದರ್ಶಿ ಕೆ.ಜಿ.ಮಂಜುನಾಥ್. ಕಸಾಪ ಕಾರ್ಯದರ್ಶಿ ಶ್ರೀನಿವಾಸ ಮಳಲಿ,ಕೋಶಾಧ್ಯಕ್ಷ ಸಿ.ಲೋಕೇಶ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪರ್ಕ ಸಂಖ್ಯೆ : 9449510078

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now