ಚಿತ್ರದುರ್ಗ, (ಅ.13) : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಅ. 21 ರಿಂದ 23 ರವರೆಗೆ ನಡೆಯಬೇಕಾಗಿದ್ದ ಕ್ರೀಡಾಕೂಟವನ್ನು 22 ರಿಂದ 24ರ ವರೆಗೆ ದಾವಣಗೆರೆಯಲ್ಲಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್ ತಿಳಿಸಿದ್ದಾರೆ.
ಅ. 22 ರಿಂದ 24 ರವರೆಗೂ ನಡೆಯಲಿರುವ ಕ್ರೀಡಾಕೂಟದಲ್ಲಿ ಸರಿಸುಮಾರು ರಾಜ್ಯದಾದ್ಯಂತ ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸುಮಾರು 9 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಸರ್ಕಾರವು ಮೂರು ದಿನಗಳ ವಿಶೇಷ ಸಾಂದರ್ಭಿಕ ರಜೆ ಯನ್ನು ನೀಡಿದ್ದು ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.