Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆಪ್ಟೆಂಬರ್ 17 ರಂದು ದಿವಂಗತ ಸಿದ್ದವ್ವನಹಳ್ಳಿ ಕೃಷ್ಣಶರ್ಮರವರ ರಾಜ್ಯ ಮಟ್ಟದ ವಿಚಾರ ಸಂಕಿರಣ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ. 16 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿಯ ಜ್ಞಾನಪೂರ್ಣ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ಸೆ. 17 ರ ಬುಧವಾರ 10 ಗಂಟೆಗೆ ದಿ. ಸಿದ್ದವ್ವನಹಳ್ಳಿ ಕೃಷ್ಣಶರ್ಮ ಅವರ ಕುರಿತಂತೆ ರಾಜ್ಯ ಮಟ್ಟದ ವಿಚಾರ ಸಂಕಿರಣ ನಡೆಯಲಿದೆ ಎಂದು ಸಂಸ್ಕಾರ ಭಾರತೀ ಚಿತ್ರದುರ್ಗ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಶಿಧರ್ ರಾವ್ ತಿಳಿಸಿದ್ದಾರೆ.

ಸಂಸ್ಕಾರ ಭಾರತೀ (ರಿ), ಕರ್ನಾಟಕ ದಕ್ಷಿಣ ಪ್ರಾಂತ್ಯದ ಸಾಹಿತ್ಯ ವಿಭಾಗ ಹಾಗೂ ಸಂಸ್ಕಾರ ಭಾರತೀ ಚಿತ್ರದುರ್ಗ ಜಿಲ್ಲಾ ಸಮಿತಿಯಿಂದ ಈ ವಿಚಾರ ಸಂಕಿರಣ ಆಯೋಜಿಸಲಾಗಿದೆ.

ಈ ವಿಚಾರ ಸಂಕಿರಣದ ಉದ್ಘಾಟನೆಯನ್ನು ಕರ್ನಾಟಕ ಸಂಸ್ಕøತ ವಿಶ್ವ ವಿದ್ಯಾನಿಲಯದ ವಿಶ್ರಾಂತ ಉಪಕುಲ ಪತಿಗಳಾದ ಡಾ. ಮಲ್ಲೇಪುರಂ ಜಿ. ವೆಂಕಟೇಶ್ ನೇರವೇರಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ಜ್ಞಾನಪೂರ್ಣ ಇಂಟರ್ ನ್ಯಾಷನಲ್ ಶಾಲೆಯ ಸಂಸ್ಥಾಪಕರಾದ ವೆಂಕಟೇಶ್‍ರೆಡ್ಡಿ, ಜಲತಜ್ಞರಾದ ಡಾ.ಎನ್.ಜೆ.ದೇವರಾಜ ರೆಡ್ಡಿ, ಶರಣ ಸಾಹಿತ್ಯ ಪರಿಷತ್ ರಾಜ್ಯ ಉಪಾಧ್ಯಕ್ಷರಾದ ಕೆ.ಎಂ.ವಿರೇಶ್, ಸಂಸ್ಕಾರ ಭಾರತೀಯ ಪ್ರಾಂತ ಸಾಹಿತ್ಯ ವಿಭಾಗದ ಸಂಚಾಲಕರಾದ ಡಾ.ರಾಜೀವಲೋಚನ, ಸಾಹಿತ್ಯ ವಿಭಾಗ ಜಿಲ್ಲಾ ಸಂಚಾಲಕರಾದ ಶ್ರೀಮತಿ ಚಂದ್ರಿಕ ಸುರೇಶ್, ಪ್ರಾಂತ ಕಾರ್ಯದರ್ಶಿ ಮಾರುತಿ ಮೋಹನ್ ಉಪಸ್ಥಿತರಿದ್ದು, ಸಂಸ್ಕಾರ ಭಾರತೀ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಉಮೇಶ್ ವಿ ತುಪ್ಪದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ದಿವಂಗತ ಸಿದ್ದವ್ವನಹಳ್ಳಿ ಕೃಷ್ಣಶರ್ಮರ ಬದುಕು ಬರಹ ಇದರ ವಿಷಯ ಮಂಡನೆಯನ್ನು ಸಂಸ್ಕøತಿ ಚಿಂತಕರಾದ ಡಾ.ಜಿ.ಬಿ.ಹರೀಶ್ ಹಾಗೂ ದಿವಂಗತ ಸಿದ್ದವ್ವನಹಳ್ಳಿ ಕೃಷ್ಣಶರ್ಮರ ಪ್ರಮುಖ ಕೃತಿಗಳ ಅವಲೋಕನವನ್ನು ಡಾ.ತಾರಿಣಿ ಶುಭದಾಯಿಣಿ ಮತ್ತು ದಿವಂಗತ ಸಿದ್ದವ್ವನಹಳ್ಳಿ ಕೃಷ್ಣಶರ್ಮರ ಪತ್ರಿಕ ಬರಹಗಳ ಅವಲೋಕನವನ್ನು ಡಾ.ಸಿಬಂತಿ ಪದ್ಮನಾಭ ವಿಷಯ ಮಂಡನೆ ಮಾಡಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಲೇಖಕರಾದ ಶ್ರೀಮತಿ ರಾಧಾ ಟೀಕಲ್, ಬರಹಗಾರರಾದ ಡಾ.ಲೋಕೇಶ್ ಅಗಸನಕಟ್ಟೆ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಡಾ.ಶಿವಮೂರ್ತಿ ಭಾಗವಹಿಸಲಿದ್ದಾರೆ. ಸಂಸ್ಕಾರ ಭಾರತೀ (ರಿ). ಪ್ರಾಂತಮಟ್ಟದ ಪದಾಧಿಕಾರಿಗಳು, ಸಾಹಿತ್ಯಾಸಕ್ತರು, ಕಲಾಸಕ್ತರು, ಚಿಂತಕರು ಹಾಗೂ ಜಿಲ್ಲಾ ಸಮಿತಿಯ ಸದಸ್ಯರು ಭಾಗವಹಿಸುವಂತೆ ಶಶಿಧರ್ ರಾವ್ ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now