Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

---Advertisement---

 

 

ಚಿತ್ರದುರ್ಗ. ಫೆ.20: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನಲ್ಲಿ (ಜನವರಿ ಅವೃತ್ತಿ) ಪ್ರಥಮ ವರ್ಷದB.A, B.Com, B.Sc., B.Lib.I.Sc., B.C.A., B.B.A, B.S.W,  M.A, M.Com, M.A.-M.C.J., M.Lib.I.Sc., M.B.A., M.Sc., M.C.A., M.S.W.,  ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು PG-Diploma/ Diploma/Certificate  ಕೋರ್ಸ್‍ಗಳ ಪ್ರವೇಶಾತಿಗಾಗಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶಾತಿಯ ಪ್ರಕ್ರಿಯೆಯು ಈಗಾಗಲೇ 2025ರ ಫೆ. 10 ರಿಂದ ಪ್ರಾರಂಭವಾಗಿದೆ.

ಆದ್ದರಿಂದ ಆಸಕ್ತ ವಿದ್ಯಾರ್ಥಿಗಳು ಮೇಲ್ಕಂಡ ವಿವಿಧ ಪದವಿ, ಕೋರ್ಸ್‍ಗಳ ಪ್ರವೇಶಾತಿಗಾಗಿ Online Admission Portal [https://ksouportal.com/views/StudentHome.aspx]  ನಲ್ಲಿ ಆನ್‍ಲೈನ್ ಮೂಲಕ ಪ್ರವೇಶಾತಿಯ ಅರ್ಜಿಯನ್ನು ಭರ್ತಿಮಾಡಿ ಸಲ್ಲಿಸಿ, ತದನಂತರ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ, ಪ್ರವೇಶಾತಿ ಪಡೆಯಬಹುದಾಗಿರುತ್ತದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ, ಕೆ.ಎಸ್.ಆರ್.ಟಿ.ಸಿ. ನೌಕರರುಗಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ. ಅಲ್ಲದೇ ಕೋವಿಡ್-19 ನಿಂದಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ಪೂರ್ಣ ಪ್ರಮಾಣದ ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿ.ಇಡಿ, ಎಂ.ಬಿ.ಎ. ಕೋರ್ಸುಗಳನ್ನು ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ಅಲ್ಲದೆ ಎರಡು ಶೈಕ್ಷಣಿಕ ಕೋರ್ಸುಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿರುತ್ತದೆ.

ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಯ ಅಂತಿಮ ದಿನಾಂಕದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕಿ ಬಿ.ಆರ್.ರಾಧಿಕಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ವೀಕ್ಷಿಸುವುದು ಅಥವಾ ಮೊ.ನಂ. 8722669855, 7204352581, 9008905457, 8310111244, 8277205613 ಸಂಪರ್ಕಿಸಬಹುದು ಅಥವಾ ಖುದ್ದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...