Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಿಳಾ ನೌಕರರ ಸಂಘಟನೆಗೆ ರಾಜ್ಯ ಪ್ರವಾಸ : ರೋಶಿನಿಗೌಡ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 05 : ಬೀದರ್ ನಿಂದ ಚಾಮರಾಜನಗರದವರೆಗೆ ಪ್ರವಾಸ ಕೈಗೊಂಡು ರಾಜ್ಯ ಸರ್ಕಾರಿ ಮಹಿಳಾ ನೌಕರರನ್ನು ಸಂಘಟಿಸಲಾಗುವುದೆಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಶಿನಿಗೌಡ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರವಾಸದ ಸಂದರ್ಭದಲ್ಲಿ ಸದಸ್ಯತ್ವ ಅಭಿಯಾನ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಗುವುದು. ಮಹಿಳೆಯರಿಗೆ ವೈದ್ಯಕೀಯ ತಪಾಸಣೆ, ಕಾನೂನು ಅರಿವು ಕುರಿತು ಕಾರ್ಯಾಗಾರ ನಡೆಸುವ ಮೂಲಕ ಜಾಗೃತಿ ಮೂಡಿಸಲಾಗುವುದು.

ಮಹಿಳಾ ನೌಕರರ ಮೇಲೆ ಹಲ್ಲೆ, ಕಿರುಕುಳ, ದೌರ್ಜನ್ಯ ನಡೆಸುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದೆಂದರು.
ಸಂಘಟನೆ ಹುಟ್ಟಿಕೊಂಡು ಎರಡುವರೆ ವರ್ಷಗಳಾಗಿದೆ. ರಾಜ್ಯದ 20 ಜಿಲ್ಲೆಗಳಲ್ಲಿ ಸಂಘಟನೆಯಿದೆ. ಉಳಿದ ಜಿಲ್ಲೆಗಳಲ್ಲಿಯೂ ಸರ್ಕಾರಿ ಮಹಿಳಾ ನೌಕರರನ್ನು ಸಂಘಟಿಸಿ ಸ್ವಾಭಿಮಾನ, ರಕ್ಷಣೆ, ಬದ್ದತೆ, ಹೇಗೆ ಹಕ್ಕು ಪ್ರತಿಪಾದಿಸಬೇಕೆನ್ನುವುದರ ಕುರಿತು ಅರಿವು ಮೂಡಿಸಲಾಗುವುದು. ಆರೋಗ್ಯ ಸಂಜೀವಿನಿ ಯೋಜನೆ
ಪುನರ್ ಪರಿಶೀಲಿಸುವುದು ಸೇರಿದಂತೆ ಎನ್.ಪಿ.ಎಸ್. ರದ್ದುಪಡಿಸಿ ಓ.ಪಿ.ಎಸ್. ಯೋಜನೆ ಜಾರಿಗೆ ತರುವಂತೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದರು.
ಮುಂದಿನ ಅಧಿವೇಶನದಲ್ಲಿ ಋತುಚಕ್ರ ರಜೆ ಕಾಯಿದೆ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದಾರೆ. ಸೆ.13 ರನ್ನು ಮಹಿಳಾ ನೌಕರರ ದಿನಾಚರಣೆಯೆಂದು ಘೋಷಿಸುವಂತೆ ಸರ್ಕಾರವನ್ನು ಕೇಳಿದ್ದೇವೆ. ಶಿಶುಪಾಲನಾ ಕೇಂದ್ರ ಸ್ಥಾಪನೆಗೂ ನಮ್ಮ ಬೇಡಿಕೆಯಿದೆ ಎಂದು ರೋಶಿನಿಗೌಡ ಹೇಳಿದರು.

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಎಂ.ಸುಶ್ಮರಾಣಿ, ರಾಜ್ಯ ಖಜಾಂಚಿ ಡಾ.ವೀಣಾ ಕೃಷ್ಣಮೂರ್ತಿ, ಸಂಘಟನಾ ಕಾರ್ಯದರ್ಶಿಗಳಾದ ಮಂಜುಳ, ಲಲಿತಮ್ಮ, ಎಂ.ಆಶಾರಾಣಿ, ಡಾ.ವಿಜಯಲಕ್ಷ್ಮಿ ಚಳ್ಳಕೆರೆ ತಾಲ್ಲೂಕು ಅಧ್ಯಕ್ಷೆ ಕರಿಯಮ್ಮ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...