ದಾವಣಗೆರೆಗೆ ನಾಳೆಯಿಂದ ಮೂರು ದಿನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

2 Min Read

 

ದಾವಣಗೆರೆ ಏ.14  ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಏಪ್ರಿಲ್ 15, 16 ಮತ್ತು 17 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳುವರು.

ಏಪ್ರಿಲ್ 14 ರಂದು ರಾತ್ರಿ 8.30 ಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಏಪ್ರಿಲ್ 15 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಯದೇವ ವೃತ್ತದ ಬಳಿ ಬ್ರಾಹ್ಮಣ ಹಾಸ್ಟೆಲ್ ಮುಂಭಾಗದಲ್ಲಿ ದಲಿತ ಸಂರಕ್ಷಣಾ ಸಮಿತಿಯಿಂದ ಹಮ್ಮಿಕೊಂಡಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮಲ್ಲಿ ಭಾಗವಹಿಸುವರು. ಮ.1.30 ಕ್ಕೆ ಆವರಗೊಳ್ಳ ಗ್ರಾಮ ವ್ಯಾಪ್ತಿಯ ಕೇಂದ್ರೀಯ ವಿದ್ಯಾಲಯ ಹಿಂಭಾಗದಲ್ಲಿ ವಾಸಿಸುತ್ತಿರುವ ಕುಟುಂಬಗಳ ಸ್ಥಳಕ್ಕೆ ಭೇಟಿ ನೀಡುವರು. ನಂತರ ಸಂಜೆ 5 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಮಹಿಳಾ ವಸತಿ ನಿಲಯಕ್ಕೆ ಭೇಟಿ ನೀಡಿ ವಾಸ್ತವ್ಯ ಮಾಡುವರು.

 

ಏಪ್ರಿಲ್ 16 ರಂದು ಬೆಳಿಗ್ಗೆ 10.30ಕ್ಕೆ ಜಗಳೂರು ತಾಲ್ಲೂಕು ಆಸ್ಪತ್ರೆ ಹಾಗೂ ತಾಲ್ಲೂಕು ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 12 ಗಂಟೆಗೆ ಜಗಳೂರು ತಾಲ್ಲೂಕಿನ ಹನುಮಂತಪುರ ಗೊಲ್ಲರಹಟ್ಟಿ ಗ್ರಾಮಕ್ಕೆ ಭೇಟಿ ನೀಡುವರು. ನಂತರ ಮ.3 ರಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆಗೆ ಸಂಬಂಧಿಸಿದಂತೆ ಜಾರಿಯಾದ ಪ್ರಕರಣ, ಅಂಕಿಅಂಶಗಳ ಚರ್ಚೆ, ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯ ಹಾಗೂ ಆಂತರಿಕ ದೂರು ಸಮಿತಿ ಬಗ್ಗೆ ಪರಿಶೀಲನೆ, ಮಹಿಳಾ ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚೆ, ಮಹಿಳಾ ಮೀಸಲು, ಕಾಲೇಜು ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆ ಚರ್ಚಿಸುವರು. ನಂತರ 4 ಗಂಟೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸಂಜೆ 6 ಗಂಟೆಗೆ ದಾವಣಗೆರೆಯಲ್ಲಿ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಭೇಟಿ ನೀಡಿ ವಾಸ್ತವ್ಯ ಹೂಡುವರು.
ಏಪ್ರಿಲ್ 17 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿಗೆ ಪ್ರಯಾಣಿಸುವರು.

ಅಹವಾಲು ಸ್ವೀಕಾರ :
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿಚೌಧರಿ ಅವರು ಏಪ್ರಿಲ್ 16 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಎಸ್‍ಹೆಚ್‍ಡಬ್ಲ್ಯೂ ಜಿಲ್ಲೆಯಲ್ಲಿ ಜಾರಿಯಾದ ಬಗ್ಗೆ ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯ ಹಾಗೂ ಅಂತರಿಕ ದೂರು ಸಮಿತಿ, ಮಹಿಳಾ ದೌರ್ಜನ್ಯ ಪ್ರಕರಣ, ಮಹಿಳಾ ಮೀಸಲಾತಿ, ಕಾಲೇಜು ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸುರಕ್ಷತೆಯ ಕುರಿತಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks