Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಹಿರಿಯೂರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಪ್ರವಾಸ

---Advertisement---

 

ಚಿತ್ರದುರ್ಗ. ಜೂನ್. 29: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌಧರಿ ಅವರು ಇದೇ ಜೂನ್ 30ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಜೂನ್ 30ರಂದು ಬೆಳಿಗ್ಗೆ 8ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 11ಕ್ಕೆ ಹಿರಿಯೂರಿಗೆ ಆಗಮಿಸಿ, ಹಿರಿಯೂರಿನ ದೇವಗಿರಿ ನಗರದ ವಾಣಿ ವಿಲಾಸ ಕಾಲೇಜು ಹತ್ತಿರದ ಗಣಿ ಟ್ರಸ್ಟ್ ನೂತನ ಕಚೇರಿ ಮತ್ತು ಗ್ರಂಥಾಲಯದ ಉದ್ಘಾಟನೆ ಹಾಗೂ ಕಾಡುಗೊಲ್ಲ ಬುಡಕಟ್ಟು ಮಹಿಳಾ ಜಾಗೃತಿ ಕಾರ್ಯಕ್ರಮ ಉದ್ಘಾಟಿಸುವರು. ನಂತರ ಮಧ್ಯಾಹ್ನ 2ಕ್ಕೆ ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡುವರು. ಸಂಜೆ 4ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment