Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ್ಯಂತ ‘ಪ್ರಜಾಸೇವಾ ಆಂದೋಲನ’ ಸಭೆ: ಸರ್ಕಾರದಿಂದ ಮಾರ್ಗದರ್ಶಿ ಸೂಚಿ ಬಿಡುಗಡೆ

---Advertisement---

ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸೂಕ್ತ ರೀತಿಯಲ್ಲಿ ಶೀಘ್ರ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ರಾಜ್ಯದ್ಯಂತ ‘ಪ್ರಜಾಸೇವಾ ಆಂದೋಲನ’ ಸಭೆಗಳನ್ನು ಆಯೋಜಿಸಲು ಮಾರ್ಗದರ್ಶಿ সূಚಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಪ್ರಜಾಸೇವಾ) ಸುತ್ತೋಲೆ ಹೊರಡಿಸಿದೆ.

ಪ್ರತಿ ತಿಂಗಳ ಎಲ್ಲಾ ಶನಿವಾರಗಳಂದು (2ನೇ ಹಾಗೂ 4ನೇ ಶನಿವಾರ ಸೇರಿದಂತೆ) ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಕಡ್ಡಾಯವಾಗಿ ಸಭೆಗಳನ್ನು ನಡೆಸಲಾಗುವುದು.

1ನೇ ಮತ್ತು 3ನೇ ಶನಿವಾರ: ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆ ಹಾಗೂ ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದಲ್ಲಿ ಆಯೋಜನೆ.

2ನೇ ಮತ್ತು 4ನೇ ಶನಿವಾರ: ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು/ಹೋಬಳಿ ಮಟ್ಟದ ಸಭೆಗಳು.

ಅಧಿಕಾರಿಗಳ ಉಪಸ್ಥಿತಿ: ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸಿಇಒ ಹಾಗೂ ತಾಲೂಕು/ಹೋಬಳಿ ಮಟ್ಟದ ಪ್ರಮುಖ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುವುದು ಕಡ್ಡಾಯ.

ಪೂರ್ವ ಸಿದ್ಧತೆ: ಸಭೆಗೆ 15 ದಿನಗಳ ಮುಂಚಿತವಾಗಿ ಕಂದಾಯ ಸಿಬ್ಬಂದಿ ಮನೆ-ಮನೆಗೆ ತೆರಳಿ ಸಾರ್ವಜನಿಕರಿಗೆ ಮುದ್ರಿತ ಅರ್ಜಿ ನಮೂನೆ ಮತ್ತು ಮಾಹಿತಿ ತಲುಪಿಸಲಿದ್ದಾರೆ.

ಆನ್‌ಲೈನ್ ಪೋರ್ಟಲ್: ಸ್ವೀಕರಿಸಲಾದ ಎಲ್ಲಾ ಅರ್ಜಿಗಳನ್ನು ಸ್ಥಳದಲ್ಲೇ ipgrs.karnataka.gov.in ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ, ಸ್ವೀಕೃತಿ ಸಂಖ್ಯೆಯನ್ನು (Acknowledgement) ಸಾರ್ವಜನಿಕರಿಗೆ ನೀಡಲಾಗುತ್ತದೆ.

ಅನುದಾನ: ತಾಲೂಕು ಮಟ್ಟದ ಸಭೆಗಳ ನಿರ್ವಹಣೆಗೆ ₹5 ಲಕ್ಷ, ಇತರ ತಾಲೂಕು ಮಟ್ಟದ ಸಭೆಗೆ ₹1 ಲಕ್ಷ ಹಾಗೂ ಹೋಬಳಿ ಮಟ್ಟದ ಸಭೆಗೆ ₹50,000 ಅನುದಾನ ಬಿಡುಗಡೆ ಮಾಡಲಾಗುವುದು.

ಮೇಲ್ವಿಚಾರಣೆ ಹಾಗೂ ಪರಿಶೀಲನೆ:

ಪ್ರತಿ ಬುಧವಾರ ಜಿಲ್ಲಾಧಿಕಾರಿಗಳು ಅರ್ಜಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಅಷ್ಟೇ ಅಲ್ಲದೆ, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳು ರಾಜ್ಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ವಿಲೇವಾರಿ ಮಾಡದ ಜಿಲ್ಲಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.

Join WhatsApp

Join Now

Join Telegram

Join Now