ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
![](https://suddione.com/content/uploads/2024/10/gifmaker_me-5-1.gif)
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 11 : ಸ್ಟೀಲ್ ಫ್ಯಾಬ್ರಿಕೇಷನ್ ಇಂಡಸ್ಟ್ರೀಸ್ ಮಾಲೀಕರ ಅಸೋಸಿಯೇಷನ್ ಉದ್ಗಾಟನಾ ಸಮಾರಂಭ ಫೆ.12 ರಂದು ಬೆಳಿಗ್ಗೆ 10-30 ಕ್ಕೆ ರಂಗಮಂದಿರದಲ್ಲಿ ನಡೆಯಲಿದೆ.
ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಸಮಾರಂಭ ಉದ್ಘಾಟಿಸಲಿದ್ದಾರೆ. ಸ್ಟೀಲ್ ಫ್ಯಾಬ್ರಿಕೇಷನ್ ಇಂಡಸ್ಟ್ರೀಸ್ ಮಾಲೀಕರ ಅಸೋಸಿಯೇಷನ್ ಅಧ್ಯಕ್ಷ ನಾಜಿಮ್ ಪಾಷಾ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಮಾಜಿ ಸಚಿವ ಹೆಚ್.ಆಂಜನೇಯ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಡಿ.ಐ.ಸಿ. ಜಂಟಿ ನಿರ್ದೇಶಕ ಬಿ.ಆನಂದ್, ಕೆ.ಎಸ್.ಎಸ್.ಐ.ಡಿ.ಸಿ ನಿವೃತ್ತ ವ್ಯವಸ್ಥಾಪಕ ರಂಗಸ್ವಾಮಿ, ಬೆಸ್ಕಾಂ ಮುಖ್ಯ ಇಂಜಿನಿಯರ್ ರೋಮ್‍ರಾಜ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸಿ.ಟಿ.ಕುಮಾರ್‍ಬಾಬು, ನಗರಸಭೆ ಅಧ್ಯಕ್ಷೆ ಸುಮಿತ, ಪೌರಾಯುಕ್ತೆ ರೇಣುಕ, ಕಾರ್ಮಿಕ ಅಧಿಕಾರಿ ಇಬ್ರಾಹಿಂ ಇವರುಗಳು ಭಾಗವಹಿಸಲಿದ್ದಾರೆ.
![](https://suddione.com/content/uploads/2025/01/studio-11.webp)
![](https://suddione.com/content/uploads/2025/02/site.webp)