Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಶಾಲೆ-ಕಾಲೇಜು ಆಸ್ತಿ ರಕ್ಷಣೆಗೆ ಕ್ರಮ : 12 ವರ್ಷದಿಂದ ಬಳಸುತ್ತಿರುವ ಜಾಗ ಇನ್ಮುಂದೆ ರಾಜ್ಯ ಸರ್ಕಾರ ಸ್ವತ್ತು!

---Advertisement---

ಸುದ್ದಿಒನ್,ಬೆಂಗಳೂರು,ಮೇ.12: ರಾಜ್ಯದಲ್ಲಿರುವ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳ ಭೂಮಿಯನ್ನು ಅಕ್ರಮ ಒತ್ತುವರಿಯಿಂದ ಮುಕ್ತಗೊಳಿಸಲು ಮತ್ತು ಆಸ್ತಿ ಹಕ್ಕುಗಳನ್ನು ಸುರಕ್ಷಿತವಾಗಿರಿಸಲು ಕಂದಾಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಕನಿಷ್ಠ 12 ವರ್ಷಗಳಿಂದ ನಿರಂತರವಾಗಿ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳು ಬಳಸುತ್ತಿರುವ ಜಾಗವನ್ನು ಅಧಿಕೃತವಾಗಿ ರಾಜ್ಯ ಸರ್ಕಾರದ ಸ್ವತ್ತು ಎಂದು ಘೋಷಿಸಿ, ಪಹಣಿ (RTC) ಗಳಲ್ಲಿ ದಾಖಲಿಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

‘ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳ ಭೂಮಿಗಳ ಅಧಿನಿಯಮ 2026’ ಜಾರಿ

ಹೊಸದಾಗಿ ಜಾರಿಗೆ ತರಲಾಗಿರುವ ‘ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳ ಭೂಮಿಗಳ ಅಧಿನಿಯಮ 2026’ ರ ಅನ್ವಯ, ಕನಿಷ್ಠ 12 ವರ್ಷಗಳಿಂದ ಸರ್ಕಾರಿ ಶಾಲೆ ಅಥವಾ ಕಾಲೇಜುಗಳ ವಶದಲ್ಲಿರುವ ಮತ್ತು ಅವುಗಳು ಬಳಸುತ್ತಿರುವ ಭೂಮಿಯು ಇನ್ಮುಂದೆ ಯಾವುದೇ ರೀತಿಯ ಕಾನೂನು ದಾವೆ, ಹಕ್ಕು ಹಾಗೂ ಬಾಧ್ಯತೆಗಳಿಂದ ಮುಕ್ತವಾಗಲಿದೆ. ಈ ಜಮೀನುಗಳು ಸಂಪೂರ್ಣವಾಗಿ ರಾಜ್ಯ ಸರ್ಕಾರದ ಪರವಾಗಿ ನಿಹಿತವಾಗಿರಲಿವೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಸರ್ಕಾರಿ ಶಾಲೆಗಳ ಆಸ್ತಿಯನ್ನು ಉಳಿಸಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಮುಖ್ಯಸ್ಥರು ಮತ್ತು ತಹಶೀಲ್ದಾರ್‌ಗಳ ಜಂಟಿ ಸಹಭಾಗಿತ್ವದಲ್ಲಿ ಸಂಬಂಧಪಟ್ಟ ಪಹಣಿ (RTC) ಗಳಲ್ಲಿ ಸರ್ಕಾರಿ ಶಾಲೆಯ ಹೆಸರನ್ನು ಅಧಿಕೃತವಾಗಿ ದಾಖಲಿಸಬೇಕು.ಈ ಪ್ರಕ್ರಿಯೆಯನ್ನು ವಿಳಂಬ ಮಾಡದೆ ತುರ್ತಾಗಿ ಪೂರ್ಣಗೊಳಿಸುವಂತೆ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ.

ಒಂದು ವೇಳೆ ಈ ಜಮೀನುಗಳಲ್ಲಿ ಯಾವುದೇ ರೀತಿಯ ಅಕ್ರಮ ಒತ್ತುವರಿ ಅಥವಾ ಅನಧಿಕೃತ ಬಳಕೆ ಕಂಡುಬಂದಲ್ಲಿ, ಜಿಲ್ಲಾಡಳಿತದ ಮೂಲಕ ನಿಯಮಾನುಸಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಕಂದಾಯ ಆಯುಕ್ತರಾದ ಮುಲ್ಲೈ ಮುಹಿಲನ್ ಎಂ ಪೂರಾನಂ ಅವರು ಆದೇಶಿಸಿದ್ದಾರೆ. ಅಷ್ಟೇ ಅಲ್ಲದೆ, ಒತ್ತುವರಿ ತೆರವು ಹಾಗೂ ಪಹಣಿ ದಾಖಲಾತಿ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ತುರ್ತಾಗಿ ವರದಿಯನ್ನು ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now