ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್, ಚಿತ್ರದುರ್ಗ
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಆ. 11 : ಹಿಂದೂಗಳ ಶ್ರದ್ಧಾ ಕೇಂದ್ರ ಧರ್ಮಸ್ಥಳದಲ್ಲಿ ತನಿಖೆಯ ಹೆಸರಲ್ಲಿ ನಡೆಯುತ್ತಿರುವ ಧರ್ಮ ದ್ರೋಹಿ ಚಟುವಟಿಕೆಗಳು ಕೂಡಲೇ ಸ್ಥಗಿತಗೊಳ್ಳಬೇಕು ಎಂದು ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್ ಲಿಂಗಮೂರ್ತಿ ಒತ್ತಾಯಿಸಿದ್ದಾರೆ.
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಕುರಿತು ಸೋಮವಾರ ಮಾತನಾಡಿದ ಅವರು ಎಸ್‍ಐಟಿ ನಡೆಸುತ್ತಿರುವ ತನಿಖೆ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ ಶ್ರದ್ಧೆಗೆ ಅಪಚಾರ ಎನ್ನುವಂತಿದೆ. ಅಸಮರ್ಪಕವಾದ ತನಿಕೆಯನ್ನ ಕೂಡಲೇ ಸ್ಥಗಿತಗೊಳಿಸಿ ಇಲ್ಲಿಯವರೆಗೆ ನಡೆಸಿರುವ ತನಿಖೆಯ ಕುರಿತು ಮಧ್ಯಂತರ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಪಿ ಎಫ್ ಐ ಸೇರಿದಂತೆ ಮತಾಂತರ ಶಕ್ತಿಗಳು ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಅಪಪ್ರಚಾರದಲ್ಲಿ ತೊಡಗಿದ್ದು ಸದ್ಯ ನಡೆಯುತ್ತಿರುವ ತನಿಖೆ ಕೂಡ ಅದಕ್ಕೆ ಪುಷ್ಟಿ ಕೊಡುವಂತಿದೆ. ಅನಾಮಿಕ ದೂರುದಾರನ ಹೆಸರಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ತೇಜೋವದೆ ಮಾಡಲಾಗುತ್ತಿದೆ. ಸರ್ಕಾರದ ಇಂತಹ ವ್ಯವಸ್ಥೆ ಧರ್ಮಸ್ಥಳದ ಅಸಂಖ್ಯಾತ ಭಕ್ತರು ಹಾಗೂ ಹಿಂದುಗಳಿಗೆ ನೋವು ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಹಾಗೂ ಕಾರ್ಮಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ಅಪಪ್ರಚಾರವನ್ನು ಸಹಿಸಲು ಸಾಧ್ಯವಿಲ್ಲ. ತಕ್ಷಣ ಸರ್ಕಾರ ಧರ್ಮಸ್ಥಳ ಕ್ಷೇತ್ರದ ಗೌರವ ಸಂರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು. ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗದಿದ್ದರೆ ಹೊಸದುರ್ಗದಿಂದ ಧರ್ಮಸ್ಥಳಕ್ಕೆ ಅಸಂಖ್ಯಾತ ಭಕ್ತರೊಂದಿಗೆ ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟನೆಗೆ ಮುಂದಾಗುತ್ತೇವೆ. ಮುಂದಿನ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಸ್ ಲಿಂಗಮೂರ್ತಿ ಎಚ್ಚರಿಕೆ ನೀಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












