Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಜಯಪುರದಲ್ಲಿ ಬೀದಿ ನಾಯಿಗಳ ಅಟ್ಟಹಾಸ: 3 ವರ್ಷದ ಮಗುವನ್ನು 100 ಅಡಿ ಎಳೆದೊಯ್ದ ಶ್ವಾನಗಳು!

---Advertisement---

ವಿಜಯಪುರ: ಜಿಲ್ಲೆಯ ಜನತೆ ಬೆಚ್ಚಿಬೀಳುವಂತಹ ಭೀಕರ ಘಟನೆಯೊಂದು ನಗರದ ರಾಜಕುಮಾರ್ ಲೇಔಟ್‌ನಲ್ಲಿ ಮಂಗಳವಾರ ನಡೆದಿದೆ. ಮನೆಯ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಹಸುಳೆಯ ಮೇಲೆ ಬೀದಿ ನಾಯಿಗಳ ಗುಂಪು ಅಟ್ಯಾಕ್ ಮಾಡಿದ್ದು, ಮಗು ಗಂಭೀರವಾಗಿ ಗಾಯಗೊಂಡಿದೆ.

ಸ್ಥಳೀಯ ನಿವಾಸಿ ಸಂತೋಷ್ ಬಿರಾದಾರ್ ಎಂಬುವವರ 3 ವರ್ಷದ ಪುತ್ರ ವಿರಾಜ್, ಎಂದಿನಂತೆ ತನ್ನ ಮನೆಯ ಮುಂಭಾಗ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ನುಗ್ಗಿ ಬಂದ ಬೀದಿ ನಾಯಿಗಳ ಹಿಂಡು ಮಗುವಿನ ಮೇಲೆರಗಿದೆ. ಅತಿ ಕ್ರೂರವಾಗಿ ವರ್ತಿಸಿದ ಒಂದು ನಾಯಿ, ಮಗುವನ್ನು ಕಚ್ಚಿ ಹಿಡಿದು ಸುಮಾರು 100 ಅಡಿ ದೂರದವರೆಗೆ ರಸ್ತೆಯಲ್ಲಿ ಎಳೆದೊಯ್ದಿದೆ.

ಮಗುವಿನ ಕಿರುಚಾಟ ಮತ್ತು ನಾಯಿಗಳ ಅಟ್ಟಹಾಸವನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಹರಸಾಹಸಪಟ್ಟು ನಾಯಿಗಳನ್ನು ಓಡಿಸುವಲ್ಲಿ ಯಶಸ್ವಿಯಾದ ಸ್ಥಳೀಯರು, ರಕ್ತದ ಮಡುವಿನಲ್ಲಿದ್ದ ಬಾಲಕನನ್ನು ರಕ್ಷಿಸಿದ್ದಾರೆ. ಮಗುವಿನ ಬೆನ್ನು ಮತ್ತು ತೊಡೆಯ ಭಾಗಕ್ಕೆ ಆಳವಾದ ಗಾಯಗಳಾಗಿದ್ದು, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಯಿ ಮಗುವನ್ನು ಎಳೆದೊಯ್ಯುತ್ತಿರುವ ಭೀಕರ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ದೃಶ್ಯವನ್ನು ಕಂಡು ಪೋಷಕರು ಮತ್ತು ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now