Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಅಕ್ರಮ ಆಟೋಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 09 : ಪರವಾನಿಗೆ ಪಡೆಯದೇ ಹಾಗೂ ನೊಂದಣಿ ಇಲ್ಲದೇ ಸಂಚರಿಸುತ್ತಿರುವ ಆಟೋ ರಿಕ್ಷಾಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. 20 ವರ್ಷಗಳ ಮೇಲ್ಪಟ್ಟ ಮೈನ್ಸ್ ಲಾರಿಗಳು ಓಡಾಟ ಈಗಾಗಲೇ ನಿರ್ಬಂಧಿಸಲಾಗಿದ್ದು, ಒಂದು ವೇಳೆ ಇಂತಹ ಲಾರಿಗಳು ಸಂಚಾರ ಮಾಡಿದರೆ ಅಂತಹ ವಾಹನಗಳನ್ನು ಸೀಜ್ ಮಾಡಬೇಕು. ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಟ್ಯಾಕ್ಟರ್-ಟ್ರಾö್ಯಲಿಗಳಿಗೆ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪ್ರಸ್ತುತ 7,993 ಆಟೋಗಳಿಗೆ ಅಧಿಕೃತ ಪರವಾನಗಿ ನೀಡಲಾಗಿದೆ. ಆದರೆ, ಒಟ್ಟು ನೋಂದಾಯಿತ ಆಟೋಗಳ ಸಂಖ್ಯೆ 10,223 ರಷ್ಟಿದ್ದು, ಸುಮಾರು 2,230 ಆಟೋಗಳು ಪರವಾನಗಿ ಇಲ್ಲದೆ ರಸ್ತೆಗಿಳಿಯುತ್ತಿರುವುದು ಗಮನಕ್ಕೆ ಬಂದಿದೆ. ಪರವಾನಗಿ ಇಲ್ಲದ ಆಟೋಗಳ ಪೈಕಿ ಸುಮಾರು 1,000 ವಾಹನಗಳು ಬೇರೆಡೆಗೆ ಸ್ಥಳಾಂತರವಾಗಿರಬಹುದು ಅಥವಾ ನೋಂದಣಿ ರದ್ದಾಗಿರಬಹುದು ಎಂದು ಅಂದಾಜಿಸಲಾಗಿದೆ. ಆದಾಗ್ಯೂ, ಇನ್ನುಳಿದ ಒಂದು ಸಾವಿರಕ್ಕೂ ಅಧಿಕ ಆಟೋಗಳು ಕಾನೂನುಬಾಹಿರವಾಗಿ ಸಂಚರಿಸುತ್ತಿದ್ದು, ಇವುಗಳ ವಿರುದ್ಧ ತಕ್ಷಣವೇ ಜಂಟಿ ಕಾರ್ಯಾಚರಣೆ ನಡೆಸಲಾಗುವುದು. ಜಿಲ್ಲೆಯಲ್ಲಿ 25 ಸಾವಿರಕ್ಕೂ ಹೆಚ್ಚು ಟ್ಯಾಕ್ಟರ್‌ಗಳಿದ್ದು, ಆಂದೋಲದನದ ಮೂಲಕ 2500 ಟ್ಯಾಕ್ಟರ್‌ಗಳಿಗೆ ಮಾತ್ರ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಮಾಡಲಾಗಿದ್ದು, ಎಲ್ಲ ಟ್ಯಾಕ್ಟರ್‌ಗಳಿಗೆ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಆಂದೋಲನ ಮುಂದುವರಿಸುವುದಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೆಸಿಂಘೆ ಸಭೆಯಲ್ಲಿ ಮಾಹಿತಿ ನೀಡಿದರು.

 

ಇದೇ ವೇಳೆ ಚಿತ್ರದುರ್ಗ ನಗರದಲ್ಲಿ ಟ್ರಾಫಿಕ್ ಸಿಗ್ನಲ್‌ಗಳ ನಿರ್ವಹಣೆ, ರಬ್ಬರ್ ಹಂಪ್ಸ್, ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಿಕೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...