ಚಿತ್ರದುರ್ಗ. ಏ.10: ರೈತರಿಗೆ ವಿತರಿಸಬೇಕಾದ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಮಾರಾಟ ಮಾಡುವುದು ಕಂಡುಬಂದರೆ ಅಂತಹ ಮಾರಾಟಗಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಚಳ್ಳಕೆರೆ ಉಪವಿಭಾಗದ ಉಪ ಕೃಷಿ ನಿರ್ದೇಶಕ ಡಾ. ಡಿ.ಉಮೇಶ್ ಎಚ್ಚರಿಸಿದರು.
ಹಿರಿಯೂರಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ರಸಗೊಬ್ಬರ ಮಾರಾಟಗಾರರ ಜಾಗೃತಿ ತರಬೇತಿ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಉ. ಪ್ರತಿ ಮಾರಾಟಗಾರರು ಕಡ್ಡಾಯವಾಗಿ ಕೆ-ಕಿಸಾನ್ ಆನ್‍ಲೈನ್ ತಂತ್ರಾಂಶದ ಮೂಲಕವೇ ಗೊಬ್ಬರ ವಿತರಿಸಬೇಕು. ಜಮೀನು ಇರುವ ರೈತರ ಎಫ್.ಐ.ಡಿ ಅಥವಾ ಆಧಾರ್ ಸಂಖ್ಯೆಯನ್ನು ಬಳಸಿಕೊಂಡು ಯೂರಿಯಾ ನೀಡಬೇಕು ಎಂದು ನಿರ್ದೇಶನ ನೀಡಿದರು.
ಹಿರಿಯೂರು ಸಹಾಯಕ ಕೃಷಿ ನಿರ್ದೇಶಕ ಡಾ. ಜೆ.ಅಶೋಕ ಮಾತನಾಡಿ, ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳು ಅಗತ್ಯ ವಸ್ತುಗಳ ಕಾಯ್ದೆಯ ವ್ಯಾಪ್ತಿಗೆ ಬರುತ್ತವೆ. ಲಾಭದ ಉದ್ದೇಶದಿಂದ ದಾಸ್ತಾನು ಮಾಡಿಕೊಂಡು ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ. ಮಾರಾಟಗಾರರು ಕಾಲಕಾಲಕ್ಕೆ ತಮ್ಮ ಪರವಾನಗಿಯನ್ನು ನವೀಕರಿಸಿಕೊಳ್ಳಬೇಕು” ಎಂದು ತಿಳಿಸಿದರು.
ತಾಲ್ಲೂಕು ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಹರ್ಷ ಮಾತನಾಡಿ, ರೈತರಿಗೆ ಸಕಾಲದಲ್ಲಿ ಗೊಬ್ಬರ ಒದಗಿಸಲು ಸಿದ್ಧರಿದ್ದೇವೆ. ಪ್ರಸ್ತುತ ತಾಲ್ಲೂಕಿನಲ್ಲಿ ಯಾವುದೇ ರಸಗೊಬ್ಬರದ ದಾಸ್ತಾನು ಕೊರತೆ ಇಲ್ಲ ಎಂದರು.
ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಕಂದಿಕೆರೆ ಜಗದೀಶ್ ಮಾತನಾಡಿ, ಜಿಲ್ಲೆಗೆ ನೇರವಾಗಿ ಗೊಬ್ಬರ ಪೂರೈಕೆಯಾದರೆ ಸಾಗಾಣಿಕೆ ವೆಚ್ಚ ಕಡಿಮೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನಿಕಾಂತ್, ಕೃಷಿ ಅಧಿಕಾರಿಗಳಾದ ಎಂ.ಎಸ್. ಕಿರಣ್ ಕುಮಾರ್, ಮದನ್ ಕುಮಾರ್, ಪಾರ್ವತಮ್ಮ, ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ವೆಂಕಟೇಶ್ ಸೇರಿದಂತೆ ಕೃಷಿ ಪರಿಕರ ಮಾರಾಟಗಾರರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










