ಚಳ್ಳಕೆರೆ : ಪರಶುರಾಂಪುರ ಹೋಬಳಿಯನ್ನು ತಾಲ್ಲೂಕು ಕೇಂದ್ರವಾಗಿ ಪರಿಗಣಿಸುವಂತೆ ಜನಜಾಗೃತಿ ವೇದಿಕೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಪರಶುರಾಂಪುರ ಶಾಖೆ ಅನಿರ್ದಿಷ್ಟ ಕಾಲ ಮುಷ್ಕರ ಹೂಡಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿ ತಹಶೀಲ್ದಾರ್ ರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಜೂನ್.01 ರಂದು ಬೆಳಿಗ್ಗೆ 10:00 ಗಂಟೆಗೆ ಮುಷ್ಕರ ಹಮ್ಮಿಕೊಂಡ ಸಂಘಟನೆಯವರು, ಕಳೆದ 20 ವರ್ಷದಿಂದ ಈ ಬೇಡಿಕೆಯನ್ನು ನಿರಂತರವಾಗಿ ಶಾಸಕರು ಮಂತ್ರಿಗಳು ಹಾಗೂ ಅಧಿಕಾರಿಗಳಿಗೆ ಸಲ್ಲಿಸುತ್ತಾ ಬಂದಿದ್ದೇವೆ ಇದಲ್ಲದೆ ತಾಲೂಕಿನಲ್ಲಿರುವ ರೈತರಿಗೆ ಬೆಳೆ ವಿಮೆ ಸಂದಾಯವಾಗಿಲ್ಲ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೂ ಮುಷ್ಕರವನ್ನು ಕೈಬಿಡುವುದಿಲ್ಲ ವೆಂದು ಪಟ್ಟು ಹಿಡಿದರು ಸ್ಥಳಕ್ಕೆ ಆಗಮಿಸಿದ ತಹಶಿಲ್ದಾರ್ ರಘುಮೂರ್ತಿ ಸರ್ಕಾರದ ಮಟ್ಟದಲ್ಲಿ ಪರಶುರಾಂಪುರ ತಾಲೂಕು ಕೇಂದ್ರವನ್ನಾಗಿ ಪರಿಗಣಿಸಲು ಪರಿಶೀಲನೆ ಹಂತದಲ್ಲಿದೆ.
ಬೆಳೆ ವಿಮೆಗೆ ಸಂಬಂಧಿಸಿದಂತ ಈಗಾಗಲೇ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಸಂಬಂಧಿಸಿದ ಕಂಪನಿಯ ಜನರೊಂದಿಗೆ ಮಾತನಾಡಿ ಹಾಗೂ ಸಭೆ ಮಾಡಿ ಒಂದು ತಿಂಗಳ ಒಳಗಾಗಿ ಹಣವನ್ನು ರೈತರ ಖಾತೆಗೆ ಹಾಕುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಯಾವುದೇ ರೈತರು ಆತಂಕಗೊಳ್ಳುವ ಅಗತ್ಯವಿಲ್ಲ.
ರೈತರಿಗೋಸ್ಕರ ತಾಲೂಕಿನಲ್ಲಿ ಈಗಾಗಲೇ 67 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಪರಿಹಾರ ನೀಡಲಾಗಿದೆ. ದಾರಿ, ಸ್ಮಶಾನ ಮುಂತಾದ ಸಮಸ್ಯೆಗಳನ್ನು ನೇರವಾಗಿ ಗ್ರಾಮಕ್ಕೆ ಹೋಗಿ ಬಗೆಹರಿಸಲಾಗುತ್ತಿದೆ. ಅತಿ ಮಳೆಯಿಂದ ನಷ್ಟವಾಗದಂತೆ ಎಲ್ಲಾ ರೈತರಿಗೂ ಈಗಾಗಲೇ ಪರಿಹಾರ ನೀಡಲಾಗಿದೆ ತಾಲೂಕಿನಲ್ಲಿರುವ ಎಲ್ಲಾ ಗ್ರಾಮಗಳನ್ನು ಮನೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ 40 ಗ್ರಾಮಗಳನ್ನು ಮಾಡಲಾಗಿದೆ.
ಉಳಿದಂತೆ ಎಲ್ಲಾ ಗ್ರಾಮಗಳನ್ನು ಕೂಡ ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡಲಾಗುತ್ತಿದೆ. ರೈತರ ಹಿತಕಾಯುವ ದೃಷ್ಟಿಯಲ್ಲಿ ತಾಲೂಕಾಡಳಿತ ರೈತರೊಂದಿಗೆ ಉದ್ದೇಶಿತ ಮುಷ್ಕರವನ್ನು ಕೈ ಬಿಡುವಂತೆ ಮನವಿ ಮಾಡಿದರು.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…