ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇದ್ದಕ್ಕಿದ್ದ ಹಾಗೇ ಬಂದ ಗಾಳಿ, ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ರಸ್ತೆಗಳಲ್ಲೆಲ್ಲಾ ಮರಗಳು ಬಿದ್ದು ಸಂಚಾರಕ್ಕೆ ಮೂರ್ನಾಲ್ಕು ಗಂಟೆಗಳ ಕಾಲ ಅಸ್ತವ್ಯಸ್ತವಾಗಿತ್ತು. ಇನ್ನು ಬೆಂಗಳೂರಿನ ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 8 ಜನ ಸಾವನ್ನರುವ ಘಟನೆ ನಡೆದಿದೆ.

ಘಟನೆ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಇದೇ ವೇಳೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಬಳಿಕ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ ಪ್ರಕರಣದಲ್ಲಿ 7 ಮಂದಿ ಮೃತಪಟ್ಟಿರುವುದನ್ನು ಅಧಿಕಾರಿಗಳು ತಿಳಿಸಿದರು. ವ್ಯಾಪರ ಮಾಡುತ್ತಿದ್ದವರ ಮೇಲೆ ಗೋಡೆ ಕುಸಿದ ಘಟನೆ ಬಗ್ಗೆ ಆಕ್ರೋಶಗೊಂಡ ಸಿಎಂ ಸ್ಥಳದಲ್ಲೇ ತನಿಖೆ ಮಾಡಲು ಆದೇಶ ನೀಡಿದರು.
ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಸಿಎಂ ಭೇಟಿ ನೀಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ಕಾಂಪೌಂಡ್ ಕುಸಿದ ದುರಂತಕ್ಕೆ ಸಿಎಂ ಆಘಾತ. ಜಿಬಿಎ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡರು. ಏನ್ ಕ್ರಮಕೈಗೊಂಡಿದ್ದೀರಿ ಎಂದು ಸಿಎಂ ಕ್ಲಾಸ್. ಹಳೆ ಗೋಡೆ ನೋಡೋಕಾಗಲ್ವಾ…? ನಿಮ್ಮ ಮಧ್ಯೆ ಕೋ ಆರ್ಡಿನೇಷನ್ ಇರಲ್ವಾ? ಎಚ್ಚರವಹಿಸಿದ್ದರೆ ಈ ಅನಾಹುತ ತಪ್ಪಿಸಬಹುದಿತ್ತು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಿಎಂ ಸಿದ್ದರಾಮಯ್ಯ ಅವರು ತರಾಟೆ ತೆಗೆದುಕೊಂಡಿದ್ದಾರೆ.



















