Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗುರು ಮತ್ತು ಗುರಿ ಇದ್ದರೆ ವಿದ್ಯಾರ್ಥಿ ಜೀವನ ಸಾರ್ಥಕ: ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಸ್ವಾಮೀಜಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 14 : ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟವಾದ ಗುರು ಮತ್ತು ಗುರಿ ಹೊಂದಿ ಶಿಕ್ಷಣ ಹಾಗೂ ಉತ್ತಮ ಸಂಸ್ಕಾರವನ್ನು ಅಳವಡಿಸಿಕೊಂಡರೆ ಅವರ ಜೀವನ ಸಾರ್ಥಕವಾಗುವುದಲ್ಲದೆ, ಸಮಾಜವೂ ಅಭಿವೃದ್ಧಿಯತ್ತ ಸಾಗುತ್ತದೆ ಎಂದು ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಸ್ವಾಮೀಜಿ ಅಭಿಪ್ರಾಯಪಟ್ಟರು.

ಚಿತ್ರದುರ್ಗ ಜಿಲ್ಲಾ ವೀರಶೈವ ಸಮಾಜದ ವತಿಯಿಂದ ಆಯೋಜಿಸಿದ್ದ ಪ್ರಸಕ್ತ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಬಸವಾದಿ ಶರಣರ ತತ್ವ-ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪರಿಶುದ್ಧ ಜೀವನ ನಡೆಸಬೇಕು. ಸಂಸ್ಕಾರಯುತ ಶಿಕ್ಷಣದೊಂದಿಗೆ ಸತ್ಯ, ಶುದ್ಧ ಕಾಯಕ ಮತ್ತು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಸಮಾಜ ಮತ್ತಷ್ಟು ಶ್ರೀಮಂತವಾಗುತ್ತದೆ ಎಂದು ಹೇಳಿದರು.ವಿದ್ಯಾರ್ಥಿಗಳು ಪೋಷಕರು ಹಾಗೂ ಗುರು-ಹಿರಿಯರ ಮಾರ್ಗದರ್ಶನದಲ್ಲಿ ತಮ್ಮ ಪ್ರತಿಭೆಯನ್ನು ಬೆಳೆಸಿಕೊಂಡು ದೇಶಕ್ಕೆ ಪ್ರಜ್ಞಾವಂತ ನಾಗರಿಕರಾಗಿ ಹೊರಹೊಮ್ಮಬೇಕು ಎಂದು ಕರೆ ನೀಡಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಆತ್ಮವಿಶ್ವಾಸ, ಛಲ ಹಾಗೂ ಪ್ರಾಮಾಣಿಕ ಪ್ರಯತ್ನವನ್ನು ಜೀವನದ ಮೂಲಮಂತ್ರವಾಗಿಸಿಕೊಳ್ಳಬೇಕು ಎಂದರು. ಪೋಷಕರ ಕನಸು-ಆಕಾಂಕ್ಷೆಗಳನ್ನು ಈಡೇರಿಸುವ ಜೊತೆಗೆ ಧರ್ಮ, ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಗೌರವ ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಹೆಸರನ್ನು ತರಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿತ್ರದುರ್ಗ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಹೆಚ್.ಎಸ್. ತಿಪ್ಪೇಸ್ವಾಮಿ ಮಾತನಾಡಿ, ಸಮಾಜ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸದೃಢವಾದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಆಧುನಿಕ ಶಿಕ್ಷಣವನ್ನು ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜದ ಪ್ರಗತಿಗೆ ವಿದ್ಯಾರ್ಥಿಗಳು ತಮ್ಮ ಕೊಡುಗೆ ನೀಡಬೇಕು ಎಂದು ಹೇಳಿದರು.

ಸಮಾಜದ ಕಾರ್ಯದರ್ಶಿ ಪಿ. ವೀರೇಂದ್ರ ಕುಮಾರ್ ಹಾಗೂ ಸಹಕಾರ್ಯದರ್ಶಿ ಜಿತೇಂದ್ರ ಹುಲಿಕುಂಟೆ ಸಮಾಜದ ಕಾರ್ಯಯೋಜನೆ, ಸಂಘಟನಾ ಚಟುವಟಿಕೆಗಳು ಹಾಗೂ ಭವಿಷ್ಯದ ಯೋಜನೆಗಳ ಕುರಿತು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಸಮಾಜದ ನಿರ್ದೇಶಕರಾದ ಎಸ್. ಷಡಕ್ಷರಯ್ಯ, ಶ್ರೀಮತಿ ಟಿ.ಕೆ. ಲತಾ ಉಮೇಶ್, ಸಿದ್ದವ್ವನಹಳ್ಳಿ ಎಸ್. ಪರಮೇಶ್, ಡಿ.ಎಸ್. ಮಲ್ಲಿಕಾರ್ಜುನ, ಡಿ.ವಿ.ಎಸ್. ಪ್ರದೀಪ್, ಟಿ. ಜಯ್ಯಪ್ಪ, ಜಿ.ಎಂ. ಪ್ರಕಾಶ್, ನಿರಂಜನ್ ದೇವರಮನೆ, ಎಂ. ಸಿದ್ದಪ್ಪ ಸೇರಿದಂತೆ ಹಲವು ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

​ಸರ್ಕಾರಿ ಬ್ಯಾಂಕ್ ಖಾತೆಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಬ್ಯಾಂಕ್ ದಾಖಲೆಗಳಲ್ಲಿ ಕಡ್ಡಾಯವಾಗಿ ‘ಸರ್ಕಾರಿ ಇ-ಮೇಲ್ ಐಡಿ’ ಬಳಸಲು ಆದೇಶ

ಡೇಟಾ ಸೆಂಟರ್ ಕ್ರಾಂತಿ: 2030ರ ವೇಳೆಗೆ ಭಾರತದಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯತೆ!

ಬೆಂಗಳೂರಿನ ಫುಟ್‌ಬಾಲ್ ಪ್ರಿಯರಿಗೆ ಗುಡ್ ನ್ಯೂಸ್: ಫಿಫಾ ವಿಶ್ವಕಪ್ ಹಿನ್ನೆಲೆ ಮಧ್ಯರಾತ್ರಿ 3.30ರವರೆಗೆ ಹೋಟೆಲ್, ರೆಸ್ಟೋರೆಂಟ್‌ ತೆರೆಯಲು ಅನುಮತಿ!

ಜುಲೈ 16 ರಂದು ರಂಗಕರ್ಮಿ ಕೆ.ವಿ ಸುಬ್ಬಣ್ಣ ಸ್ಮರಣೋತ್ಸವ : ಕನ್ನಡ ಗೀತಗಾಯನ ತರಬೇತಿ ಕಾರ್ಯಾಗಾರ

ಚಿತ್ರದುರ್ಗ ಅಭಿವೃದ್ಧಿಗೆ ವೇಗ ನೀಡಲು ಶಾಸಕ ವೀರೇಂದ್ರ ಪಪ್ಪಿ ಒತ್ತಾಯ; ಈ ನಾಲ್ಕು ಪ್ರಮುಖ ಯೋಜನೆಗಳಿಗೆ ಅನುದಾನ ಬೇಡಿಕೆ

ಆಷಾಢ ಅಮಾವಾಸ್ಯೆ: ಕೋಟೆ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಭಕ್ತರ ಸಾಗರ