Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೃತ ವಿದ್ಯಾರ್ಥಿನಿ ವರ್ಷಿತಾ ತಾಯಿಗೆ ಅಡುಗೆ ಸಹಾಯಕರ ನೌಕರಿ

---Advertisement---

 

ಚಿತ್ರದುರ್ಗ. ಸೆ.20: ಹಿರಿಯೂರು ತಾಲ್ಲೂಕಿನ ಕೊವೇರಹಟ್ಟಿಯ ಮೃತ ವಿದ್ಯಾರ್ಥಿನಿ ವರ್ಷಿತಾ ಅವರ ತಾಯಿಗೆ ಅಡುಗೆ ಸಹಾಯಕರ ನೌಕರಿ ಆದೇಶವನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿತರಿಸಿದರು.
ಕೋವೇರಹಟ್ಟಿಯ ವರ್ಷಿತಾ ಎಂಬ ವಿದ್ಯಾರ್ಥಿನಿಯ ಮೃತ ದೇಹ ಇತ್ತೀಚೆಗೆ ಚಿತ್ರದುರ್ಗ ತಾಲ್ಲೂಕಿನ ಗೋನೂರು ಬಳಿ ಪತ್ತೆಯಾಗಿತ್ತು.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಆರ್ಥಿಕವಾಗಿ ಆಧಾರ ನೀಡುವ ಉದ್ದೇಶದಿಂದ, ವರ್ಷಿತಾ ಅವರ ತಾಯಿ ಟಿ. ಜ್ಯೋತಿ ಅವರಿಗೆ ಬುರುಜನರೊಪ್ಪದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಅಡುಗೆ ಸಹಾಯಕರ ಹುದ್ದೆಗೆ ನೇಮಕ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮೃತ ವಿದ್ಯಾರ್ಥಿನಿ ವರ್ಷಿತಾ ತಂದೆ ತಿಪ್ಪೇಸ್ವಾಮಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now