ವಿದ್ಯಾರ್ಥಿನಿ ಜೊತೆ ಮಾತಾಡಿದ್ದಕ್ಕೆ ಹೊಡೆದಾಟ : ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು..!

suddionenews
1 Min Read

 

ದಕ್ಷಿಣ ಕನ್ನಡ : ಎರಡು ತಂಡಗಳ ವಿದ್ಯಾರ್ಥಿಗಳು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆದಿಲ್, ಆದಿತ್ಯ, ಪ್ರಣಾಮ್ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು.

 

ವಿದ್ಯಾರ್ಥಿನಿಯ ಜೊತೆ ಮಾತನಾಡಿದ ವಿಚಾರದಲ್ಲಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಎರಡು ತಂಡಗಳು ಹೊಡೆದಾಡಿಕೊಂಡಿದ್ದಾರೆ. ಪುತ್ತೂರು ತಾಲೂಕಿನ ಕೊಂಬೆಟ್ಟು ಪದವಿಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ಘಟನೆಯಲ್ಲಿ ಗಾಯಗೊಂಡ ಕಾರಣ, ಆದಿಲ್ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೆ. ಇನ್ನೊಂದು ಗುಂಪಿನ ಆದಿತ್ಯ, ಪ್ರಣಾಮ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಈ ಘಟನೆ ಖಂಡಿಸಿ ಎವಿವಿಪಿ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ಮುಗಿಯುತ್ತಿದಂತೆ ಮತ್ತೆ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಜಿಲ್ಲೆಯ ಪುತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *