Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾರ್ಥಿಗಳು ಶಿಕ್ಷಣವಂತರಾಗಿ ಉನ್ನತ ಹುದ್ದೆ ಅಲಂಕರಿಸಿ : ಪಿಡಿಒ ದೀಪ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 21 : ಸರ್ಕಾರ ಮಕ್ಕಳಿಗೆ ಬೇಕಾದ ಬಟ್ಟೆ, ಪುಸ್ತಕ, ಊಟ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾಭ್ಯಾಸ ಮಾಡಿ, ಶಿಕ್ಷಣವಂತರಾಗಿ ರಾಷ್ಟ್ರಪತಿ, ಪ್ರಧಾನಿ, ಐಎಎಸ್, ಐಪಿಎಸ್ ಅಧಿಕಾರಿಯಂತೆ ಉನ್ನತ ಹುದ್ದೆ ಅಲಂಕರಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೀಪ ಹೇಳಿದರು.

ತಾಲ್ಲೂಕಿನ ಭೀಮಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ
ಮಕ್ಕಳ ಗ್ರಾಮ ಸಭೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.

ಮುಂದುವರೆದು ಮಾತನಾಡಿದ ಅವರು, ಮಕ್ಕಳನ್ನು ಸದಾ ಪ್ರೀತಿಸಿದ್ದ ರಾಷ್ಟ್ರಪತಿ ಅಬ್ದುಲ್ ಕಲಾಂ ರವರಂತೆ ನಿಮಗೂ ರಾಷ್ಟ್ರಪತಿಯಾಗುವ ಅವಕಾಶವಿದೆ. ಮಕ್ಕಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಬೇಕು. ತಂದೆ, ತಾಯಿ ಹಾಗೂ ಶಿಕ್ಷಕರಿಗೆ ಒಳ್ಳೆಯ ಹೆಸರು ತರಬೇಕು. ಶಾಲೆಯಲ್ಲಿ ಏನಾದರೂ ಸಮಸ್ಯೆಗಳಿದ್ದರೆ ನನ್ನ ಬಳಿ ತಿಳಿಸಿ ಎಂದು ಹೇಳಿದರು.

ಮುಖ್ಯ ಶಿಕ್ಷಕಿ ಸೌಮ್ಯ ರೆಡ್ಡಿ ಮಾತನಾಡಿ ಶಾಲೆಯ ಕಾಂಪೌಂಡ್ ಇಲ್ಲದ ಕಾರಣ ದನಕರುಗಳ ನುಗ್ಗಿ ನೆಟ್ಟಿರುವ ಗಿಡಗಳನ್ನು ತಿನ್ನುತ್ತವೆ. ರಾತ್ರಿಯ ವೇಳೆ ದುಷ್ಕರ್ಮಿಗಳು ಅನೈತಿಕ ಚಟುವಟಿಕೆಗಳನ್ನು ಮಾಡುತ್ತಾರೆ. ಆದ್ದರಿಂದ ಕಾಂಪೌಂಡ್ ವ್ಯವಸ್ಥೆ ಮಾಡಿಸಿಕೊಡಿ ಮತ್ತು ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟಕ್ಕೆ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡಿಸಿಕೊಡಬೇಕೆಂದು ಮನವಿ ಮಾಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಉಮೇಶ್ ಮಾತನಾಡಿ ಶಾಲೆಯ ಆವರಣದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತವೆ ಎಂದು ಮುಖ್ಯ ಶಿಕ್ಷಕರು ತಿಳಿಸಿದ್ದಾರೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಆದಷ್ಟು ಬೇಗ ಪೊಲೀಸರ ಗಮನಕ್ಕೆ ತರುತ್ತೇವೆ. ಹಾಗೆಯೇ ಮಕ್ಕಳಿಗೆ ಬೇಕಾದ ನೀರಿನ ವ್ಯವಸ್ಥೆ ಕಾಂಪೌಂಡ್ ಶಾಲಾ ಆವರಣದಲ್ಲಿ ಸ್ವಚ್ಛತೆಯ ಬಗ್ಗೆ ಆದಷ್ಟು ಬೇಗ ಸಮಸ್ಯೆಯನ್ನು ಪರಿಹಾರ ಮಾಡಿಕೊಡುತ್ತೇನೆಂದು ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಲಾಕ್ಷಮ್ಮ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತಿ ಸದಸ್ಯರುಗಳಾದ ಸಿದ್ದಗಂಗಮ್ಮ, ಮಂಜುನಾಥ್, S D A ವೆಂಕಟೇಶ್, ಗ್ರಾಮದ ಸಿಂಧೂ ಕುಮಾರಿ, ಚಂದ್ರಶೇಖರ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಚಂದ್ರನಾಯಕ್, ಶಾಲೆಯ ಶಿಕ್ಷಕರಾದ ಮಂಜುಳಮ್ಮ, ಸುಂದರಮ್ಮ, ಚೈತ್ರ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಶಾಲೆಯ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...