ಧಾರವಾಡ: ಜಿಲ್ಲೆ ಎಸ್ ಡಿ ಎಂ ಕಾಲೇಜಿನಲ್ಲಿ ಕೊರೊನಾ ಸ್ಪೋಟವಾಗಿರುವ ಹಿನ್ನೆಲೆ ಸಚಿವ ಶಂಕರ ಪಾಟೀಲ ಮುನೇಕೊಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಂದೇ ಕಾಲೇಜಿನಲ್ಲಿ ಒಟ್ಟಿಗೆ ಅಷ್ಟೊಂದು ವಿದ್ಯಾರ್ಥಿಗಳು ಸೋಂಕಿಗೆ ತುತ್ತಾಗಿದ್ದು ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ. ಹೀಗಾಗಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಸಚಿವರು, ಎಸ್.ಡಿ.ಎಂನಲ್ಲಿ 306 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಸದ್ಯ ಎಲ್ಲರ ಆರೋಗ್ಯ ಸ್ಥಿರವಾಗಿದ್ದು, ಯಾರು ಹೆದರು ಅವಶ್ಯಕತೆ ಇಲ್ಲ. ಜಿಲ್ಲೆಯ ಜನತೆ ಆತಂಕ ಪಡುವ ಅವಶ್ಯಕತೆಯೂ ಇಲ್ಲ.
ಕೊರೊನಾ ಹೆಚ್ಚಾದ ಹಿನ್ನೆಲೆ ಆ 500 ಮೀಟರ್ ವ್ಯಾಪ್ತಿಯನ್ನ ಕಂಟೇನ್ಮೆಟ್ ಝೋನ್ ಎಂದು ಪರಿಗಣನೆ ಮಾಡಲಾಗಿದೆ. ಈ ಝೋನ್ ನಲ್ಲಿನ ಜನರ ತಪಾಸಣೆ ಮಾಡಲಾಗುತ್ತದೆ. ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಹೊರ ರಾಜ್ಯದಿಂದ ಬಂದಿರಬಹುದು. ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಯಾರಿಂದ ಸೋಂಕು ಬಂದಿದೆ ಎಂಬುದರ ಖಚಿತ ಮಾಹಿತಿ ಇನ್ನು ಸಿಕ್ಕಿಲ್ಲ. ಎಲ್ಲ ಮಾಹಿತಿ ಕಲೆಹಾಕಲಾಗುತ್ತಿದೆ ಎಂದಿದ್ದಾರೆ.