Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೀಟ್ ಅಕ್ರಮ ಖಂಡಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಪ್ರಹಾರ: ಹೊಳಲ್ಕೆರೆಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 12 : ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ವಿರೋಧಿಸಿ ದೆಹಲಿಯ ಜಂತರ್‍ಮಂತರ್‍ನಲ್ಲಿ ಪ್ರತಿಭಟನೆ ನಡೆಸಿದ ಸಾವಿರಾರು ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಪ್ರಹಾರಕ್ಕೆ ಸಂಬಂಧಿಸಿಂತೆ ತಪ್ಪಿತಸ್ಥರ ವಿರುದ್ದ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವಂತೆ ಹೊಳಲ್ಕೆರೆ ಬ್ಲಾಕ್ ಯೂತ್ ಕಾಂಗ್ರೆಸ್ ವತಿಯಿಂದ ಪಟ್ಟಣದಲ್ಲಿ ಬುಧವಾರ ಶಾಂತಿಯುತ ಪ್ರತಿಭಟನೆ ನಡೆಸಿ ಪ್ರಮುಖ ಸ್ಥಳಗಳು ಹಾಗೂ ಪೆಟ್ರೋಲ್ ಬಂಕ್‍ಗಳ ಬಳಿ ಪೋಸ್ಟರ್‍ಗಳನ್ನು ಅಂಟಿಸಲಾಯಿತು.

 

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥಗೌಡರವರ ಸೂಚನೆಯಂತೆ ಹೊಳಲ್ಕೆರೆ ಪಟ್ಟಣದಲ್ಲಿ ನಡೆದ ಮೌನ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಹೊಳಲ್ಕೆರೆ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಚೇತನ್ ಮಾತನಾಡಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ನಕಲಿ ಪೊಲೀಸರು ಜಂತರ್-ಮಂತರ್‍ನಲ್ಲಿ ಪ್ರವೇಶಿಸಿದ್ದಾದರೂ ಹೇಗೆ? ಇದಕ್ಕೆ ಕೇಂದ್ರ ಸರ್ಕಾರದ ಕುಮ್ಮಕ್ಕಿದೆ ಎನ್ನುವುದು ಗೊತ್ತಾಗುತ್ತದೆ. ಗೃಹ ಸಚಿವ ಅಮಿತ್‍ಶಾ ಸದನದಲ್ಲಿ ಉತ್ತರಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವ ಎಫ್.ಐ.ಆರ್.ನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.
ಯುವ ಕಾಂಗ್ರೆಸ್ ಮುಖಂಡರುಗಳಾದ ಎಂ.ಡಿ.ಸಾಧಿಕ್ ಯೂಸುಫ್, ಶಶಿಧರ್ ಬತ್ತಯ್ಯನಹಟ್ಟಿ, ಧನಂಜಯ್, ಬೋರಯ್ಯ, ಮಹಾಂತೇಶ್, ಪ್ರದೀಪ್ ಸೇರಿದಂತೆ ಪದಾಧಿಕಾರಿಗಳು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now