Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಅಗತ್ಯ : ಸಚಿವ ಡಿ.ಸುಧಾಕರ್

Facebook
Twitter
Telegram
WhatsApp

 

ಚಿತ್ರದುರ್ಗ. ಸೆ.15: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭಾರತೀಯ ಸಂವಿಧಾನದ ಅರಿವು ಹೆಚ್ಚು ಅಗತ್ಯವಿದೆ ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಭಾರತದ ಸಂವಿಧಾನವನ್ನು ಸರಿಯಾಗಿ ಅರ್ಥಮಾಡಿಕೊಂಡು, ಹೆಚ್ಚು ತಿಳಿಯುವ ಮೂಲಕ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು. ಈ ಬಗ್ಗೆ ಹೆಚ್ಚು ಹೆಚ್ಚು ಅಭ್ಯಾಸ ಮಾಡಬೇಕು. ಸಂವಿಧಾನದ ಪೀಠಿಕೆಯನ್ನು ಅರ್ಥೈಸಿಕೊಂಡು, ಪ್ರತಿಯೊಬ್ಬರು ಅನುಸರಿಸಬೇಕು ಎಂದು ತಿಳಿಸಿದರು.

ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡದಾದ ಪ್ರಜಾಪ್ರಭುತ್ವ ಹೊಂದಿದ ಭಾರತ ದೇಶಕ್ಕೆ ಪವಿತ್ರವಾದ ಸಂವಿಧಾನದ ಕೊಟ್ಟಿರುವಂತಹ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಸಂವಿಧಾನದ ರಚನೆ ಮಾಡಿರುವಂತಹ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ನಾವೆಲ್ಲರೂ ಸದಾ ಸ್ಮರಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ನಾವು ಜೀವನ ನಡೆಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ನಮಗೆ ನೀಡಿರುವ ಹಕ್ಕುಗಳು, ಜವಾಬ್ದಾರಿಗಳನ್ನು ತಿಳಿದುಕೊಳ್ಳಲು ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಸಂವಿಧಾನದ ಕುರಿತು ಹೆಚ್ಚಿನ ಮಾಹಿತಿ ಪಡೆಯಬೇಕು.

ಭಾರತ ದೇಶ ಇಡೀ ವಿಶ್ವದಲ್ಲಿಯೇ ಪ್ರಜಾಪ್ರಭುತ್ವದಲ್ಲಿ ಪ್ರಥಮ ಸ್ಥಾನದಲ್ಲಿರುವ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಇದಕ್ಕೆ ಅಡಿಪಾಯವಾಗಿರುವುದು ನಮ್ಮ ಸಂವಿಧಾನ.  ದೇಶದಲ್ಲಿ ಸ್ವತಂತ್ರವಾಗಿ ಬದುಕು ನಡೆಸಲು ಕಾರಣವೇ ಸಂವಿಧಾನ.  ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿವಿಧ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಸಾಕಷ್ಟು ವಿಷಯಗಳ ಬಗ್ಗೆ ತಿಳುವಳಿಕೆಯನ್ನು ಪಡೆದು, ನಮಗೆ ಶ್ರೇಷ್ಟವಾದ ಸಂವಿಧಾನ ನೀಡಿದ್ದಾರೆ ಎಂದರು.

ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ. ಶಿಕ್ಷಣದಿಂದ ಮಾತ್ರ ಜಗತ್ತು ಮತ್ತು ದೇಶವನ್ನು ಬದಲಾವಣೆ ಮಾಡಲು ಸಾಧ್ಯವಿದೆ ಎಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು. 2 ವರ್ಷ 11 ತಿಂಗಳು 18 ದಿನಗಳ ಕಾಲ ರಾತ್ರಿ ಹಗಲು ಶ್ರಮವಹಿಸಿ ಸಂವಿಧಾನ ರಚನೆ ಮಾಡಿದ್ದಾರೆ.

ಸಂವಿಧಾನದಲ್ಲಿ 400ಕ್ಕೂ ಹೆಚ್ಚು ಆರ್ಟಿಕಲ್ಸ್, 25  ಭಾಗಗಳು, 12 ಷೆಡ್ಯೂಲ್‍ಗಳು ಇವೆ. ಇವೆಲ್ಲವೂ 77 ವರ್ಷ ಆದ ನಂತರವೂ ಕಾಲಕಾಲಕ್ಕೆ ಬೇಕಾದ ಬದಲಾವಣೆ ಮಾಡಲು ಕೂಡ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ್ದಾರೆ. ಅಂಬೇಡ್ಕರ್ ಅವರು ಕೆನಡಾ, ಐರಿಷ್, ಆಸ್ಟ್ರೇಲಿಯಾ, ಬ್ರಿಟನ್  ಸೇರಿದಂತೆ ಈ ಎಲ್ಲಾ ದೇಶಗಳ ಸಂವಿಧಾನದ ಬಗ್ಗೆ ಕೂಲಂಕಷವಾಗಿ ಅಧ್ಯಯನ ಮಾಡಿ ನಮ್ಮ ದೇಶಕ್ಕೆ ಅವಶ್ಯಕವಿರುವ ಅಂಶಗಳ ಕುರಿತು ಸಂಪೂರ್ಣವಾಗಿ ವಿಶ್ಲೇಷಣೆ ಮಾಡಿದ್ದಾರೆ. ಅಂಬೇಡ್ಕರ್ ನೀಡಿರುವ ಭಾರತ ಸಂವಿಧಾನ ನಮ್ಮೆಲ್ಲರಿಗೂ ದಾರಿದೀಪವಾಗಿದೆ ಎಂದರು.

ಸಂವಿಧಾನದ ಪೀಠಿಕೆಯ ಸಾರಾಂಶದ ಬಗ್ಗೆ ನಾವೆಲ್ಲರೂ ತಿಳಿದುಕೊಳ್ಳಬೇಕು. ಇದರಿಂದ ನಮ್ಮ ದೇಶ ಪ್ರಜಾಪ್ರಭುತ್ವದಲ್ಲಿ ಉತ್ತುಂಗಕ್ಕೆ ಹೋಗಬಹುದು ಹಾಗೂ ಇಡೀ ವಿಶ್ವಕ್ಕೆ ಮಾದರಿಯಾಗಿ ಇರಬಹುದು. ಹಾಗಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ಸಮಾರಂಭದಲ್ಲಿದ್ದ ಎಲ್ಲರೂ ವಾಚನ ಮಾಡಿ, ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ವಿಶೇಷ ಉಪನ್ಯಾಸ ನೀಡಿದ, ವೇದಾಂತ್ ಅವರು, ಸ್ವಾತಂತ್ರ್ಯಪೂರ್ವ ಭಾರತ ಹಾಗೂ ಸ್ವಾತಂತ್ರ್ಯ ನಂತರದ ಭಾರತ ಎರಡನ್ನೂ ಕಟ್ಟುವಂತಹ ಜವಾಬ್ದಾರಿ, ಹೊಣೆಗಾರಿಕೆ ಡಾ.ಬಿ.ಆರ್.ಅಂಬೇಡ್ಕರ್ ಅವರಿಗಿತ್ತು. ಬ್ರೀಟಿಷರು ಆಳ್ವಿಕೆ ಮಾಡಿದ ಭಾರತ ಒಡೆದ ಮನೆಯಾಗಿತ್ತು. ಒಡೆದ ಸ್ಥಿತಿಯಲ್ಲಿದ್ದ ಇಡೀ ಅಖಂಡ ಭಾರತವನ್ನು ಒಂದುಗೂಡಿಸುವ, ಸಂಭಾಳಿಸುವ ಹೊಣೆಗಾರಿಕೆಯನ್ನು ಮೊದಲನೆಯದಾಗಿ ನಿಭಾಯಿಸಬೇಕಿತ್ತು. ಇದರ ಜೊತೆಗೆ ಭಾರತದಲ್ಲಿ ಅನೇಕ ಧರ್ಮ, ಜಾತಿಗಳು, ಲಿಂಗತಾರತಮ್ಯ, ದ್ವೇಷ ಮತ್ತು ಪ್ರಾದೇಶಿಕ ಅಸಾಮಾನತೆಯಿಂದ ಭಾರತ ಕೂಡಿತ್ತು. ಇಂತಹ ಬಹುತ್ವ ಭಾರತವನ್ನು ಒಂದು ದೇಶವಾಗಿ ರೂಪಿಸುವ ಹೊಣೆ ಬಾಬಾಸಾಹೇಬ್ ಅವರ ಮೇಲಿತ್ತು. ಸಂವಿಧಾನ ರಚನೆಗೂ ಮುನ್ನ ನಾಲ್ಕು ವರ್ಷಗಳ ಕಾಲ ಸತತ ಅಧ್ಯಯನ ಮಾಡಿ ಇಡೀ ಭಾರತದ ಪೂರ್ವ ಪೀಠಿಕೆಯಲ್ಲಿ ತರುವ ಪ್ರಯತ್ನ ಮಾಡಿದ್ದಾರೆ. ಸಂವಿಧಾನದ ಪೀಠಿಕೆಯನ್ನು ಇಡೀ ಸಂವಿಧಾನವೇ ಅಡಕವಾಗಿರುವ ಹಾಗೆ ಪೀಠಿಕೆಯನ್ನು ರಚನೆ ಮಾಡಿದ್ದಾರೆ ಎಂದರು.

ಸಂವಿಧಾನದಲ್ಲಿ ಇಡೀ ಪೀಠಿಕೆಗಳಲ್ಲಿ ಅಲ್ಲಲ್ಲಿ ನಾವು ನಾವು ಎಂಬ ಪದಗಳನ್ನು ಬಳಸಿದ್ದಾರೆ. ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿದರೂ ನಾನು ಸಂವಿಧಾನ ರಚನೆ ಮಾಡಿದ್ದೇನೆ ಎಂಬ ಸಣ್ಣ ಅಂಶವೂ ಇಲ್ಲ. ನಾವು, ನಮಗಾಗಿ, ನಾವು ಇದನ್ನು ಅಳವಡಿಸಿಕೊಂಡಿದ್ದೇವೆ. ನಾವು ಎಂಬ ಪದ ಬಹುತ್ವವನ್ನು ಸೂಚಿಸುತ್ತದೆ. ಏಕತ್ವವನ್ನು ನಿರಾಕರಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ತಹಶೀಲ್ದಾರ್ ಡಾ.ನಾಗವೇಣಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ ಸೇರಿದಂತೆ ಮುಖಂಡರಾದ ತಾಜ್‍ಪೀರ್, ನಿರಂಜನಮೂರ್ತಿ, ಡಿ.ಎನ್.ಮೈಲಾರಪ್ಪ, ರವಿ, ರಾಜಣ್ಣ, ಕುಮಾರಸ್ವಾಮಿ, ಖಾದಿ ರಮೇಶ್ ಸೇರಿದಂತೆ ಮತ್ತಿತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

ಬದುಕಿನಲ್ಲಿ ರಂಗಭೂಮಿ ಉತ್ತಮ ಮಾರ್ಗದರ್ಶನ ನೀಡುತ್ತದೆ : ಡಾ.ಬಸವಕುಮಾರ ಸ್ವಾಮೀಜಿ

    ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22: ಜೀವನ ಒಂದು ನಾಟಕರಂಗ ನಾವುಗಳು ಅದರ ಪಾತ್ರಧಾರಿಗಳು. ಬದುಕಿನಲ್ಲಿ ನಾನಾ ಕಷ್ಟಸುಖಗಳು ಬರುತ್ತವೆ. ಅದಕ್ಕೆಲ್ಲಾ ಉತ್ತಮ ಮಾರ್ಗದರ್ಶನ ನೀಡುವುದು ರಂಗಭೂಮಿ ಮಾತ್ರ ಎಂದು ಎಸ್.ಜೆ.ಎಮ್. ವಿದ್ಯಾಪೀಠದ

error: Content is protected !!