ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,ಜ. 19 : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಆಯೋಜಿಸಲಾದ ವಿಧಾನ ಸಭಾ ಕ್ಷೇತ್ರವಾರು ವಿಜ್ಞಾನ ವಸ್ತು ಪ್ರದರ್ಶನವನ್ನು ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಈಚೆಗೆ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭರಮಸಾಗರ ಕೆ.ಆರ್.ಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯು “ಹಸಿರು ಜಲಜನಕ ಭವಿಷ್ಯದ ಇಂಧನ” ಎಂಬ ಮಾದರಿಯನ್ನು ಪ್ರದರ್ಶಿಸಿದ್ದು, ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ವಿಜ್ಞಾನ ಶಿಕ್ಷಕಿ ಕೆ.ಬಿ.ರಾಧಿಕಾ ಅವರಿಗೆ ಶಾಲೆಯ ಪ್ರಾಂಶುಪಾಲರಾದ ಎಸ್.ಶಶಿಕಿರಣ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.