Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ರೂಢಿಸಿಕೊಳ್ಳಬೇಕು : ಸೋಮಶೇಖರ್ ಬಿ ಅಗಡಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್. 17 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಮಟ್ಟದ ಇನ್ವೆಸ್ಟಿಟ್ಯುರ್” ಉದ್ಘಾಟನಾ ಸಮಾರಂಭ ನಡೆಯಿತು”. ಮಕ್ಕಳ ಸರ್ವತೋಮುಖ ಅಭಿವೃದ್ಧಿಯ ದೃಷ್ಠಿಯಿಂದ ಶೈಕ್ಷಣಿಕವಾಗಿ, ಕ್ರೀಡೆ ಮತ್ತು ಸಾಂಸ್ಕøತಿಕವಾಗಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು “ರೂಬಿ, ಸಪೈರ್, ಎಮರಾಲ್ಡ್, ಟೋಪಾಜ್” ಎಂಬ ನಾಲ್ಕು ಹೌಸ್‍ಗಳನ್ನು ರಚಿಸಲಾಯಿತು.

2025-26ನೇ ಸಾಲಿನ ಶಾಲಾ ನಾಯಕನಾಗಿ ಚಕ್ಷು ದೀಕ್ಷಿತ್ ಎಂ, ಶಾಲಾ ನಾಯಕಿಯಾಗಿ ಪುಣ್ಯ ಟಿ.ಜಿ ಅವರು ಆಯ್ಕೆಯಾಗಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೋಮಶೇಖರ್ ಬಿ ಅಗಡಿ ಚಿತ್ರದುರ್ಗ ಜಿಲ್ಲಾ ಅಗ್ನಿ ಶಾಮಕ ದಳದ ಅಧಿಕಾರಿಗಳು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ನಂತರ ಮಾತನಾಡುತ್ತಾ ಶಾಲಾ ನಾಯಕ ನಾಯಕಿಯರಿಗೆ ಶುಭ ಹಾರೈಸಿದರು. ಶಾಲೆಯಲ್ಲಿ ನಾಯಕತ್ವ ಗುಣವನ್ನು ಬೆಳೆಸುವಂತಹ ಈ ಕಾರ್ಯಕ್ರಮ ಜೀವನದಲ್ಲಿ ನಿಮ್ಮನ್ನು ಎತ್ತರಕ್ಕೆ ಕರೆದೊಯ್ಯಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ರೂಢಿಸಿಕೊಳ್ಳಬೇಕು. ಹಾಗೂ ಹಾಗೆಯೇ ನಾಯಕರಾದಂತಹವರು ತಮ್ಮಲ್ಲಿ ಶಿಸ್ತನ್ನು ರೂಢಿಸಿಕೊಳ್ಳುವುದರ ಜೊತೆಗೆ ತಮ್ಮೊಂದಿಗಿರುವ ಕಿರಯರಿಗೆ ಅದರ ದಾರಿಯನ್ನು ತೋರಿಸಬೇಕು.

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯು ಹೊಸ ವಿಷಯಗಳನ್ನು ಹೊಸತನವನ್ನು ಮಕ್ಕಳಲ್ಲಿ ಬೆಳೆಸಿಕೊಳ್ಳಲು ತುಂಬಾ ಉಪಯುಕ್ತವಾದ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಿರದೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಸಂಸ್ಥೆಯ ಕಾರ್ಯದರ್ಶಿಗಳಾದ ಬಿ.ವಿಜಯ್‍ಕುಮಾರ್‍ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮಲ್ಲಿ ಧನಾತ್ಮಕ ಗುಣಗಳನ್ನು ರೂಢಿಸಿಕೊಳ್ಳುವಲ್ಲಿ ಅದನ್ನು ಬೆಳೆಸಿಕೊಳ್ಳುವಲ್ಲಿ ಈ ಕಾರ್ಯಕ್ರಮವು ಸಹಕಾರಿಯಾಗಿದೆ. ಪಠ್ಯಕ್ರಮದಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಳ್ಳುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಹೆಚ್ಚಿನದಾಗಿ ಭಾಗವಹಿಸಬೇಕಾಗಿ ತಿಳಿಸಿದರು. ಬಾಲ್ಯದಲ್ಲಿಯೇ ಶಿಸ್ತಿನ ಜೊತೆಗೆ ಗುರು ಹಿರಿಯರಲ್ಲಿ ಭಕ್ತಿಯನ್ನು ಬೆಳೆಸಿಕೊಳ್ಳುವಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಸುನೀತಾ ವಿಜಯ್‍ಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಎಂ ಪೃಥ್ವೀಶ, ಮುಖ್ಯೋಪಾಧ್ಯಾಯರಾದ ತಿಪ್ಪೇಸ್ವಾಮಿ ಎನ್.ಜಿ, ಐಸಿಎಸ್‍ಸಿ ಪ್ರಾಚಾರ್ಯರಾದ ಶ್ರೀ ಬಸವರಾಜಯ್ಯ ಪಿ. ಶಿಕ್ಷಕ/ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಸೈಯೇದಾ ಸಫಾ ಸುಹಾನಿ ನಿರೂಪಿಸಿದರು, ಹಂಸ ಎಂ ಬಿ, ಸ್ವಾಗತಿಸಿದರು, ಮೋನಿಷಾ ಎಸ್ ವಂದಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment