ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆ.23 : ರಂಗ ಭಂಡಾರ ಕಲಾ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರ ಇವರ ಸಹಯೋಗದೊಂದಿಗೆ ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸಮಿನೆನಪಿಗಾಗಿ ಸಾಂಸ್ಕøತಿಕ ಕಾರ್ಯಕ್ರಮ, ವಿಚಾರ ಸಂಕಿರಣ, ಸುಗಮ ಸಂಗೀತ, ಸಮೂಹ ನೃತ್ಯ, ನಾಟಕ ಪ್ರದರ್ಶನ ಮೊಳಕಾಲ್ಮುರು ತಾಲ್ಲೂಕು ರಾಂಪುರ ಎಸ್.ಪಿ.ಎಸ್.ಆರ್. ಶಾಲೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಎಸ್.ಪಿ.ಎಸ್.ಆರ್. ಶಾಲೆ ಅಧ್ಯಕ್ಷ ಶ್ರೀಕಾಂತರೆಡ್ಡಿ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡುತ್ತ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕøತಿಕ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಗಡಿ ಭಾಗದ ಹಳ್ಳಿಗಳಲ್ಲಿ ಹಾಗೂ ಶಾಲೆಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದಕ್ಕಾಗಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್.ಪಿ.ಎಸ್.ಆರ್. ಪ್ರೌಢಶಾಲಾ ವಿಭಾಗದ ಉಪ ಪ್ರಾಚಾರ್ಯರಾದ ಜಿ.ಚಂದ್ರಶೇಖರ ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆ ಇಂತಹ ಸಾಂಸ್ಕøತಿಕ ಕಾರ್ಯಕ್ರಮಗಳ ಬಗ್ಗೆ ಆಸಕ್ತಿ ಮೂಡಿಸುವ ಜವಾಬ್ದಾರಿ ಶಿಕ್ಷಕರುಗಳ ಮೇಲಿದೆ ಎಂದು ತಿಳಿಸಿದರು.
ರಾಂಪುರ ಗಡಿಭಾಗದಲ್ಲಿರುವ ವಿದ್ಯಾರ್ಥಿಗಳಿಗೆ ಎರಡು ಭಾಷೆಗಳ ಸಮ್ಮಿಲನವಾಗುತ್ತಿದೆ ಎಂದರು.
ಶಿಕ್ಷಕ ನಿಂಗಾರೆಡ್ಡಿ ಮಾತನಾಡುತ್ತ ಕಲೆಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕೆಂದು ನುಡಿದರು.
ವಿನಯ್‍ಪ್ರಸಾದ್ ಮತ್ತು ತಂಡದಿಂದ ಸುಗಮ ಸಂಗೀತ, ಸುಂಕಣ್ಣ ಮತ್ತು ತಂಡದಿಂದ ಸಮೂಹ ನೃತ್ಯ ಪ್ರದರ್ಶನವಾಯಿತು.
ವೀರೇಶ್ ಮತ್ತು ತಂಡದವರು ಭಗತ್‍ಸಿಂಗ್ ನಾಟಕ ಅಭಿನಯಿಸಿದರು.
ರಂಗ ಭಂಡಾರ ಕಲಾ ಸಂಘದ ಅಧ್ಯಕ್ಷೆ ಬಿ.ನಿರ್ಮಲ ಸ್ವಾಗತಿಸಿದರು. ಪ್ರಕಾಶ್ ವಂದಿಸಿದರು. ಸಹ ಶಿಕ್ಷಕ ಎನ್.ಗುರುಸಿದ್ದಪ್ಪ ನಿರೂಪಿಸಿದರು.