ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು : ರೊ.ಈ.ಅರುಣ್‍ಕುಮಾರ್

1 Min Read

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಮೊ : 78998 64552

ಚಿತ್ರದುರ್ಗ, (ಡಿ.16): ರಕ್ತಕ್ಕೆ ಪರ್ಯಾಯ ಬೇರೆ ಯಾವುದೂ ಇಲ್ಲ. ಹಾಗಾಗಿ ರಕ್ತದಾನದಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವವರ ಪ್ರಾಣ ಉಳಿಸಬಹುದು ಎಂದು ರೋಟರಿ ಕ್ಲಬ್ ಚಿನ್ಮುಲಾದ್ರಿ ಅಧ್ಯಕ್ಷ ರೊ.ಈ.ಅರುಣ್‍ಕುಮಾರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನೆಹರು ಯುವ ಕೇಂದ್ರ, ರೋಟರಿ ಕ್ಲಬ್ ಚಿನ್ಮುಲಾದ್ರಿ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವತಿಯಿಂದ ಹೊಳಲ್ಕೆರೆ ರಸ್ತೆಯಲ್ಲಿರುವ ಎಸ್.ಜೆ.ಎಂ.ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರ ಉದ್ಗಾಟಿಸಿ ಮಾತನಾಡಿದರು.

ವಿಜ್ಞಾನ ತಂತ್ರಜ್ಞಾನ ಎಷ್ಟೆ ಮುಂದುವರೆದರೂ ರಕ್ತವನ್ನು ಕೃತಕವಾಗಿ ಉತ್ಪಾದನೆ ಮಾಡಲು ಆಗುವುದಿಲ್ಲ.
18 ರಿಂದ 60 ವರ್ಷ ಮೇಲ್ಪಟ್ಟವರು ಸ್ವಯಂ ಪ್ರೇರಣೆಯಿಂದ ರಕ್ತದಾನಕ್ಕೆ ಮುಂದಾಗಬೇಕು. ಅಪಘಾತ, ಹೆರಿಗೆ, ಆಪರೇಷನ್ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆಯಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ರೋಟರಿ ಕ್ಲಬ್ ಚಿನ್ಮುಲಾದ್ರಿ ಕಾರ್ಯದರ್ಶಿ ಶ್ರೀನಿವಾಸ್ ಮಳಲಿ, ರೊ.ಗಾಯತ್ರಿ ಶಿವರಾಂ, ಸದಸ್ಯ ಲಕ್ಷ್ಮಿಕಾಂತ್, ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಸುಹಾಸ್, ರೆಡ್‍ಕ್ರಾಸ್‍ನ ಕಾರ್ಯದರ್ಶಿ ಮಜಹರ್‍ಉಲ್ಲಾ, ಕಾಲೇಜಿನ ಪ್ರಾಂಶುಪಾಲರಾದ ರಮೇಶ್ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದರು. 21 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

Share This Article
Leave a Comment

Leave a Reply

Your email address will not be published. Required fields are marked *