ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ವಿಚಾರ ಮತ್ತು ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು : ಜಲಜಾಕ್ಷಿ

suddionenews
1 Min Read

ಚಿತ್ರದುರ್ಗ, (ಜ.13) : ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ವಿಚಾರ ಮತ್ತು ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು, ನೇತಾಜಿಯವರಂತಹ ಹೋರಾಟದ ಪ್ರತಿಫಲದಿಂದ ನಾವು ಇಂದು ಸ್ವಾತಂತ್ರ‍್ಯರಾಗಿ ಜೀವಿಸುತ್ತಿದ್ದೇವೆ ಎಂದು ಬಾಪೂಜಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಜಲಜಾಕ್ಷಿ ಬಿ.ಜೆ. ಹೇಳಿದರು.

ನಗರದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ
ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ಚಿತ್ರದುರ್ಗ ಜಿಲ್ಲಾ ಘಟಕ ವತಿಯಿಂದ ದೇಶದ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವರ್ಷಾಚರಣೆಯ ಅಂಗವಾಗಿ ರಾಜ್ಯ ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ
ಭಾಗವಹಿಸಿ ನೇತಾಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಅವರು ಮಾತನಾಡಿದರು.

ಈ ಕಾರ್ಯಕ್ರಮದ ಸ್ಪರ್ಧೆಗಳಲ್ಲಿ ಭಾಗವಹಿಸಲು ನೆರೆದಿದ್ದ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.

ಈ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಎಐಡಿಎಸ್‌ಓ ರಾಜ್ಯ ಸೆಕ್ರೆಟರಯೇಟ್ ಸದಸ್ಯರಾದ ಕೆ.ಈರಣ್ಣ ಅವರು ಮಾತನಾಡಿ… ಈ ಸ್ಪರ್ಧೆಗಳಲ್ಲಿ ವಿವಿಧ ಶಾಲಾ -ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಗಳು ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಒಂದು ಒಳ್ಳೆಯ ಉನ್ನತ ನೀತಿ -ನೈತಿಕತೆ ಬರಬೇಕು ಹಾಗೂ ನೇತಾಜಿ ಅವರ ಕುರಿತು ಎಲ್ಲಾ ವಿದ್ಯಾರ್ಥಿ ಸಮುದಾಯ ಸರಿಯಾದ ವಿಚಾರ ತಲುಪಲಿ ಎನ್ನುವ ಆಶಯ. ಮತ್ತು ಈ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡಿದ  ಚಿತ್ರದುರ್ಗ ಜನತೆಗೆ ಧನ್ಯವಾದಗಳು ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಸಾಮಾಜಿಕ ಹೋರಾಟಗಾರರು ರವಿಕುಮಾರ್ ಅವರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಐಡಿಎಸ್‌ಓ ಜಿಲ್ಲಾ ಘಟಕದ ಸದಸ್ಯರಾದ ನಾಗರಾಜ್.ಹೆಚ್.ಎಮ್  ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಎಐಡಿಎಸ್‌ಓ ಕಾರ್ಯಕರ್ತರುಗಳಾದ ಆರ್.ಬಸವರಾಜ, ಉಮೇಶ್ ಮುಂತಾದವರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *