ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಚಳ್ಳಕೆರೆ, ಜೂನ್. 23 : ವಿದ್ಯಾಥಿಗಳು ತಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ದೇಶಕ್ಕೆ ಕೊಡುಗೆ ನೀಡುವ ವ್ಯಕ್ತಿಗಳಾಗಬೇಕು ಎಂದು ನಗರದ ನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪೂಜ್ಯ ವೈ. ರಾಜಾರಾಮ್ ಗುರುಗಳು ತಿಳಿಸಿದರು.
ಶ್ರೀನರಹರಿ ಸೇವಾ ಪ್ರತಿಷ್ಠಾನ ಹಾಗೂ ನಾಗ ಸಿಂಹಾದ್ರಿ ಚಾರಿಟೀಸ್ ನ ವತಿಯಿಂದ ನರಹರಿ ನಗರದ ಶ್ರೀನರಹರೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇಕಡ 95 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ”ಹಾಗೂ “ಕಾಲುವೆಹಳ್ಳಿಯ ಶತಾಯುಷಿ ಸೂಲಗಿತ್ತಿ ತಳುಕಿನ ತಿಮ್ಮಕ್ಕ”ರ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಅವರು ಆಶೀರ್ವಚನ ನೀಡಿದರು.
ಶ್ರೀನರಹರಿ ಸೇವಾ ಪ್ರತಿಷ್ಠಾನದ ಜಂಟಿ ಕಾರ್ಯದರ್ಶಿ ಬಿ.ಸಿ ಸಂಜೀವಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಅಂಕಗಳಿಕೆಯ ಜೊತೆಗೆ ಸೇವಾ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಸೇವೆಯಿಂದ ಜೀವನಕ್ಕೆ ಸಾರ್ಥಕತೆ ಸಿಗುತ್ತದೆ.ಆದ್ದರಿಂದ ಉತ್ತಮ ಚಿಂತನೆಗಳ ಆಲೋಚನೆ ಹಾಗೂ ಅನುಷ್ಠಾನದಿಂದ ಸಮರ್ಥ ರಾಷ್ಟ್ರವನ್ನು ನಿರ್ಮಿಸಬಹುದು ಎಂದು ಕಿವಿಮಾತು ಹೇಳಿದರು. ವಾಣಿಜ್ಯೋದ್ಯಮಿಗಳಾದ ಸುಧಾಕರ್, ಜಿ.ಜೆ ಸತ್ಯನಾರಾಯಣ ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











