Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜೊತೆಗೆ ಸೈಬರ್ ಅಪರಾಧಗಳ ಜಾಗೃತಿ ಮೂಡಿಸಿ : ಶಿವಕುಮಾರ್

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 14 : ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜೊತೆಗೆ ಆನ್ ಲೈನ್ ಅಪರಾಧ ಹಾಗೂ ಸೈಬರ್ ಕ್ರೈಂ ಅಪರಾಧ, ಜಾಲತಾಣಗಳ ಮೂಲಕ ವಂಚನೆ, ಉದ್ಯೋಗದ ಆಮೀಷದ ವಂಚನೆ, ಸಾಮಾಜಿಕ ಜಾಲತಾಣಗಳ ಮೋಸ, ಸಾಲ ಕೊಡುವ ನೆಪದಲ್ಲಿ ಮೋಸ, ಇಂತಹ ಅಪರಾಧಗಳ ಬಗ್ಗೆ ಉತ್ತಮ ತಿಳುವಳಿಕೆ ಪಡೆದು ನೀವು ಸಮಾಜದಲ್ಲಿ ಜಾಗೃತಿ ಮೂಡಿಸಲು ಸಹಕರಿಸಬೇಕೆಂದು ಚಿತ್ರದುರ್ಗ ಸೈಬರ್ ಕ್ರೈಂ ಪೊಲೀಸ್ ಅಧಿಕಾರಿ ಶಿವಕುಮಾರ್ ತಿಳಿಸಿದರು.

ಪಿ ವಿ ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಪಿ ವಿ ಎಸ್ ಶಿಕ್ಷಣ ಮಹಾವಿದ್ಯಾಲಯ, ಯೋಗ ವೇದಾಂತ ಸೇವಾ ಸಮಿತಿ ಚಿತ್ರದುರ್ಗ, ಸೌಖ್ಯ ಹೆಲ್ತ್ ಮತ್ತು ಸ್ಕಿನ್ ಕೇರ್, ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಪತ್ತು ದಿನಾಚರಣೆ ಅಂಗವಾಗಿ ಪ್ರಥಮ ಚಿಕಿತ್ಸಾ ಕಾರ್ಯಗಾರ ಮತ್ತು ಸೈಬರ್ ಅಪರಾಧಗಳ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯೋಗ ವೇದಾಂತ ಸೇವಾ ಸಮಿತಿ ಕಾರ್ಯದರ್ಶಿ ಎಸ್ ಜಿ ಸುರೇಶ್ ಬಾಬು ಪ್ರಾಸ್ತಾವಿಕವಾಗಿ ಮಾತನಾಡಿ ಇಂದಿನ ದಿನಗಳಲ್ಲಿ ಯುವಕರಿಗೆ ಒಳ್ಳೆಯ ಸಂಸ್ಕಾರ ,ಸೈಬರ್ ಕ್ರೈಮ್ ಬಗ್ಗೆ ಉಪಯುಕ್ತ ಮಾಹಿತಿ ಮತ್ತು ವಿಪತ್ತು ನಿರ್ವಹಣೆಯ ಬಗ್ಗೆ ಮಾರ್ಗೋಪಾಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ತಿಳುವಳಿಕೆ ಅವಶ್ಯಕವಾಗಿ ಬೇಕಾಗಿರುವುದರಿಂದ ಈ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ಡಾಕ್ಟರ್ ಸಂತೋಷ್ ಉಜ್ಜನಪ್ಪ ಪ್ರಥಮ ಚಿಕಿತ್ಸೆ ದಿನದ ಮಹತ್ವ ಆಚರಣೆ ಬಗ್ಗೆ ಮಾಹಿತಿ ನೀಡಿದರು ಅವಘಡ ,ಸುಟ್ಟ ಗಾಯ, ಬೆಂಕಿ ಅವಗಡ, ಮೂರ್ಛೆ, ಮೂಳೆಮುರಿತ, ಕಾಲ್ತುಡಿತ, ಮುಂತಾದ ದುರಂತಗಳು ಸಂಭವಿಸಿದಾಗ ಅದನ್ನು ಸಮರ್ಥವಾಗಿ ಎದುರಿಸುವ ಕುರಿತು ಬಿ ಎಡ್ ಪ್ರಶಿಕ್ಷಣಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮಾಧಿಕಾರಿ ಪ್ರಹ್ಲಾದ್ ಸಂಪನ್ಮೂಲ ವ್ಯಕ್ತಿಗಳಿಗೆ ಮುಖ್ಯ ಅತಿಥಿಗಳಿಗೆ ಸನ್ಮಾನಿಸಿದರು. ರೆಡ್ ಕ್ರಾಸ್ ಬಗ್ಗೆ ಸಭಾಪತಿ ಗಾಯತ್ರಿ ಶಿವರಾಂ ಮಾಹಿತಿ ನೀಡಿದರು. ಪಿವಿಎಸ್ ಮಹಾವಿದ್ಯಾಲಯದ ಪ್ರಿನ್ಸಿಪಾಲ್ ಎಸ್. ಆರ್. ಉಷಾ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಮಜಹರುಲ್ಲಾ, ಶಿವರಾಂ, ಎಸ್ ಜಿ ಸುರೇಶ್ ಬಾಬು, ವೀರೇಶ್, ವೀರಭದ್ರ ಸ್ವಾಮಿ, ಮಂಜುನಾಥ್ ಇತರರು ಉಪಸ್ಥಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...