ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 04 : ತಾಲ್ಲೂಕಿನ ಭೀಮಸಮುದ್ರ ಸಮೀಪದ ಬೊಮ್ಮೇನಹಳ್ಳಿಯ ಶ್ರೀಯೋಗಿ ನಾರೇಯಣ ಯತಿಂದ್ರ ಆಂಗ್ಲ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಬುಧವಾರದೊಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಜ್ಞಾನ ಮಾದರಿಗಳ ಪ್ರದರ್ಶನ ಆಯೋಜಿಸಲಾಗಿತ್ತು.
ಶಾಲೆಯ ಮಾಜಿ ಅಧ್ಯಕ್ಷರಾದ ಶ್ರೀನಿವಾಸ್ ಮಾತನಾಡಿ
ವಿಜ್ಞಾನ ವಸ್ತು ಪ್ರದರ್ಶನವು (Science Exhibition) ವಿದ್ಯಾರ್ಥಿಗಳಲ್ಲಿ ವಿಜ್ಞಾನ, ಗಣಿತ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ, ಸೃಜನಾತ್ಮಕತೆ ಮತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ಒಂದು ವೇದಿಕೆಯಾಗಿದೆ. ಇದು ಪ್ರಾಯೋಗಿಕ ಕಲಿಕೆಯನ್ನು ಉತ್ತೇಜಿಸುತ್ತದೆ, ಸಂಶೋಧನಾ ಕೌಶಲ್ಯಗಳನ್ನುಅಭಿವೃದ್ಧಿಪಡಿಸುತ್ತದೆ ಮತ್ತು ಮೂಢನಂಬಿಕೆಗಳನ್ನು ತೊಲಗಿಸಲು ಸಹಾಯ ಮಾಡುತ್ತದೆ.
ವೈಜ್ಞಾನಿಕ ಸತ್ಯ ತಿಳಿಯಲು ವಿಜ್ಞಾನದ ಅಧ್ಯಯನ ಅವಶ್ಯಕ ಎಂದು ತಿಳಿಸಿದರು.
ಶಾಲೆಯ ಅಧ್ಯಕ್ಷರಾದ ಸೋಮಶೇಖರ್ ಮಾತನಾಡಿ
ಸಿ.ವಿ.ರಾಮನ್ ಅವರು ವಿಜ್ಞಾನ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.ಬೆಳಕಿನ ವೀಕೆಂದ್ರಿಕರಣದ ಪರಿಣಾಮ ಮತ್ತು ಗುಣಲಕ್ಷಣಗಳು ವೈಜ್ಞಾನಿಕ ಅಧ್ಯಯನವಾಗಿದೆ ಎಂದರು.
ಮಕ್ಕಳಿಗೆ ಕುತೂಹಲ ಸಂಶೋಧನಾ ಮನೋವೃತ್ತಿ ಮತ್ತು ಪ್ರಯೋಗಶೀಲತೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು

ಕಾರ್ಯಕ್ರಮದಲ್ಲಿ ಅಧ್ಯಕ್ಷರು ಸೋಮಶೇಖರ್, ಉಪಾಧ್ಯಕ್ಷರು ಚೆಲುವ ರಾಜ್ , ಕಾರ್ಯದರ್ಶಿ ಜ್ಞಾನೇಶ್ ರವರು ಮತ್ತು ಸದಸ್ಯರುಗಳು ಹಾಗೂ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀನಿವಾಸ,
ಮುಖ್ಯ ಶಿಕ್ಷಕರು ತೇಜಸ್ವಿನಿ , ಸಹಶಿಕ್ಷಕರು ಮತ್ತು ಮಕ್ಕಳು , ಪೋಷಕರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















