in ,

ಏಪ್ರಿಲ್ 20 ರಂದು ಚಳ್ಳಕೆರೆ ಮತಕ್ಷೇತ್ರದಲ್ಲಿ 4 ನಾಮಪತ್ರ ಸಲ್ಲಿಕೆ

suddione whatsapp group join

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, ಸುದ್ದಿಒನ್ (ಏ.20) :  2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಏಪ್ರಿಲ್ 20 ರಂದು, ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ 4 ನಾಮಪತ್ರಗಳು ಸಲ್ಲಿಕೆಯಾಗಿವೆ.

ಭಾರತೀಯ ಜನತಾ ಪಕ್ಷದ ಅನಿಲ್ ಕುಮಾರ್.ಆರ್ ಹಾಗೂ ಪಕ್ಷೇತರ ಅಭ್ಯರ್ಥಿ ಕೆ.ಟಿ.ಕುಮಾರಸ್ವಾಮಿ ತಲಾ ಎರೆಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಇದುವರೆಗೂ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳಿಂದ 13 ನಾಮಪತ್ರಗಳು ಸಲ್ಲಿಕೆಯಾಗಿವೆ. ಭಾರತೀಯ ಜತನಾ ಪಕ್ಷದ ಅಭ್ಯರ್ಥಿ ಅನಿಲ್ ಕುಮಾರ್.ಆರ್ 3 ನಾಮಪತ್ರ,
ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದಿಂದ ಟಿ.ರಘುಮೂರ್ತಿ 2,
ಜ್ಯಾತ್ಯಾತೀತ ಜನತಾ ದಳ ಪಕ್ಷದಿಂದ ರವೀಶ್ ಕುಮಾರ್.ಎಂ 2,
ಆಮ್ ಆದ್ಮಿ ಪಕ್ಷದಿಂದ ಪಾಪಣ್ಣ.ಬಿ ಹಾಗೂ ಮಾರಕ್ಕ  2,
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಭೋಜರಾಜ .ಸಿ 1,
ಪಕ್ಷೇತರ ಅಭ್ಯರ್ಥಿಗಳಾದ ಅಂಜಮ್ಮ.ಆರ್ 1 ಹಾಗೂ ಕೆ.ಟಿ.ಕುಮಾರಸ್ವಾಮಿ 2 ನಾಮಪತ್ರ ಸಲ್ಲಿಸಿದ್ದಾರೆ.

ಏ.21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.24 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಬೆಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಏರುತ್ತಿದೆ ತಾಪಮಾನ : ಹವಮಾನ ಇಲಾಖೆ ನೀಡಿದ ಎಚ್ಚರಿಕೆ ಏನು..?

ನಾಮಪತ್ರ ಸಲ್ಲಿಕೆಯ ಕೊನೆ ದಿನವೂ ಮೊಳಕಾಲ್ಮೂರು ಸೇರಿದಂತೆ 12 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಜೆಡಿಎಸ್..!