ಚಿತ್ರದುರ್ಗ,ಏ.13: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಏಪ್ರಿಲ್ 13 ಗುರುವಾರ, ಜಿಲ್ಲೆಯಲ್ಲಿ ಓರ್ವ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆಯಾಗಿದೆ.
ಚಳ್ಳಕೆರೆ ತಾಲೂಕು ದೇವರ ಮರಿಕುಂಟೆ ಗ್ರಾಮದ ಎಂ.ಟಿ.ಚಂದ್ರಣ್ಣ ತಂದೆ ಎಂ.ಆರ್.ತಿಪ್ಪೇಸ್ವಾಮಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ 99-ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಉಮೇದುವಾರಿಕೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಉಳಿದಂತೆ 97-ಮೊಳಕಾಲ್ಮೂರು, 98-ಚಳ್ಳಕೆರೆ, 100-ಹಿರಿಯೂರು, 101-ಹೊಸದುರ್ಗ, 102-ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.
ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು.ಜೆ.ಆರ್.ಜೆ ತಿಳಿಸಿದ್ದಾರೆ.