Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗಾಗಿ, ಶಾಲಾ ಸಮಯ ಧಿಡೀರ್ ಬದಲಾವಣೆ : ಎಐಡಿಎಸ್ಓ ಆಕ್ಷೇಪ

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 07 : ರಾಜ್ಯ ಸರ್ಕಾರವು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗಾಗಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ 1 ಗಂಟೆಯವರೆಗೆ ಮಾತ್ರ ಎಂದು ಬದಲಾಯಿಸಿದೆ. ಈ ಕ್ರಮವು ಅತ್ಯಂತ ಅಪ್ರಜಾತಾಂತ್ರಿಕವಾಗಿದ್ದು, ಇದರಿಂದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅಡ್ಡಿ ಎದುರಾಗುವುದರಲ್ಲಿ ಸಂಶಯವಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಮತ್ತು ಸರ್ಕಾರಿ ಶಾಲಾ ಮಕ್ಕಳ ನಡುವೆ ಭೀಕರ ತಾರತಮ್ಯ ಉಂಟಾಗುವ ಆತಂಕ ಎದುರಾಗಿದೆ.

 

ಈಗಾಗಲೇ ಶಾಲಾ ಶಿಕ್ಷಕರು ಭೋದನೆ ಮಾಡುವ ಜೊತೆಗೆ ಭೋದಕೇತರ ಚಟುವಟಿಕೆಗಳ ಜವಾಬ್ದಾರಿಗಳನ್ನು ನಿರ್ವಹಿಸುವ ದುಸ್ಥಿತಿ ಇದ್ದು, ಈ ಸಮೀಕ್ಷೆಯ ಜವಾಬ್ದಾರಿಯು ಹೊರೆಯಾಗಲಿದೆ ಎಂದು ಶಿಕ್ಷಕರಿಂದಲೂ ಕೇಳಿಬರುತ್ತಿದೆ. ಅಲ್ಲದೇ ಈ ಕ್ರಮವು ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಸ್ಥಿರತೆ ಮತ್ತು ದೈನಂದಿನ ದಿನಚರಿಯನ್ನು ಹಾಳು ಮಾಡುತ್ತದೆ. ಬೋಧನೆ ಮತ್ತು ಕಲಿಕೆಯ ಶಾಲಾ ಪ್ರಮುಖ ಕಾರ್ಯಕ್ಕೆ ತೊಂದರೆಯಾಗದಂತೆ ಪೂರಕ ಯೋಜನೆಯಿಲ್ಲದೆ, ಚರ್ಚೆಯು ಮಾಡದೇ ಶಾಲಾ ಸಮಯವನ್ನು ಏಕಾಏಕಿ ಬದಲಾಯಿಸಿರುವುದು ಶೋಚನೀಯ ಸಂಗತಿಯಾಗಿದೆ. ಜೊತೆಗೆ ಸರ್ಕಾರಿ ಶಾಲಾ ಮಕ್ಕಳ ಫಲಿತಾಂಶ ಕುಸಿಯುವ ಭೀತಿ ಉಂಟಾಗಿದೆ. ಈ ಬಾರಿ, ದಸರಾ ರಜೆ ಸೌಲಭ್ಯವನ್ನು ಪಡೆಯದ ಸರ್ಕಾರಿ ಶಾಲಾ ಶಿಕ್ಷಕರು, ಇದೀಗ ಒಂದೇ ದಿನ, ಬೋಧನೆ ಮತ್ತು ಸಮೀಕ್ಷೆ ಎರಡನ್ನೂ ನಡೆಸುವ ಹೊರೆ ಹೇರುವುದು ಸಮಂಜಸವಲ್ಲ.

ಸಮೀಕ್ಷೆಯ ಕೆಲಸಕ್ಕೆ ಸರ್ಕಾರಿ ಶಾಲಾ ಸಮಯವನ್ನು ಬಲಿಕೊಡದೆ, ಮಕ್ಕಳ ಶೈಕ್ಷಣಿಕ ಭವಿಷ್ಯ ಹಿತದೃಷ್ಟಿಯಿಂದ ತನ್ನ ಆದೇಶವನ್ನು ಹಿಂಪಡೆದು, ಸಮೀಕ್ಷೆಯ ಕೆಲಸಕ್ಕೆ ಪರ್ಯಾಯ ವ್ಯವಸ್ಥೆಗೆ ಸರ್ಕಾರವು ಕ್ರಮ ಕೈಗೊಳ್ಳಬೇಕೆಂದು ಎಐಡಿಎಸ್ಓ ಆಗ್ರಹಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...