Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುದ್ದಿಒನ್ ಇಂಪ್ಯಾಕ್ಟ್ ; ‘ಸುದ್ದಿಒನ್’ ವರದಿ ಬೆನ್ನಲ್ಲೇ ಎಚ್ಚೆತ್ತ ಬೆಸ್ಕಾಂ; ದೊಡ್ಡಸಿದ್ದವ್ವನಹಳ್ಳಿಯಲ್ಲಿ ವಾಲಿದ್ದ ವಿದ್ಯುತ್ ಕಂಬ ತೆರವು, ಹೊಸ ಕಂಬ ಅಳವಡಿಕೆ!

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂನ್‌. 21 : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಯಾವುದೇ ಕ್ಷಣದಲ್ಲಾದರೂ ಮುರಿದು ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬವನ್ನು ಕೊನೆಗೂ ತೆರವುಗೊಳಿಸಲಾಗಿದೆ. ‘ಸುದ್ದಿಒನ್’ ಪ್ರಸಾರ ಮಾಡಿದ ವಿಶೇಷ ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಬೆಸ್ಕಾಂ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ವಾಲಿದ್ದ ಕಂಬವನ್ನು ತೆಗೆದು ಹೊಸ ವಿದ್ಯುತ್ ಕಂಬವನ್ನು ಅಳವಡಿಸಿದ್ದಾರೆ.

ವರದಿಯ ಹಿನ್ನೆಲೆ :
ಗ್ರಾಮದ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಶಿಕ್ಷಕರಾದ ಹೇಮಾರೆಡ್ಡಿ ಅವರ ಮನೆಯ ಪಕ್ಕದಲ್ಲಿ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರವಿದ್ದ ವಿದ್ಯುತ್ ಕಂಬವೊಂದು ತೀವ್ರವಾಗಿ ಬಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿತ್ತು. ಈ ಕಂಬ ಯಾವುದೇ ಕ್ಷಣದಲ್ಲಾದರೂ ಮುರಿದು ಬೀಳುವ ಅಪಾಯವಿತ್ತು. ಇದೇ ರಸ್ತೆಯಲ್ಲಿ ಇತ್ತೀಚೆಗೆ ಭಾರಿ ಗಾಳಿ-ಮಳೆಗೆ ಆಂಜನೇಯ ಸ್ವಾಮಿ ದೇವಾಲಯದ ಎದುರುಗಡೆ ಅಂಜಿನಪ್ಪ ಅವರ ಮನೆ ಮುಂಭಾಗದಲ್ಲಿದ್ದ ಮತ್ತೊಂದು ಕಂಬ ಮುರಿದು ಬಿದ್ದಿತ್ತು. ಅದೃಷ್ಟವಶಾತ್ ಆಗ ಯಾವುದೇ ಅನಾಹುತ ಸಂಭವಿಸಿರಲಿಲ್ಲ.

ನಿರಂತರವಾಗಿ ಸಾರ್ವಜನಿಕರು ಹಾಗೂ ವಾಹನಗಳು ಸಂಚರಿಸುವ ಈ ಮುಖ್ಯ ರಸ್ತೆಯಲ್ಲೇ ಈ ಕಂಬ ಇಷ್ಟೊಂದು ಬಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸದಿರುವ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಗಂಭೀರ ಸಮಸ್ಯೆಯ ಕುರಿತು ‘ಸುದ್ದಿಒನ್’ ಮೇ 31 ರಂದು ವಿಸ್ತೃತ ವರದಿ ಪ್ರಸಾರ ಮಾಡುವ ಮೂಲಕ ಅಧಿಕಾರಿಗಳ ಗಮನ ಸೆಳೆದಿತ್ತು.

‘ಸುದ್ದಿಒನ್’ಗೆ ಗ್ರಾಮಸ್ಥರ ಕೃತಜ್ಞತೆ:
`ಸುದ್ದಿಒನ್ ಮಾಧ್ಯಮದಲ್ಲಿ ಈ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಬೆಸ್ಕಾಂ ಸಿಬ್ಬಂದಿ ಊರಿಗೆ ಧಾವಿಸಿ, ವಾಲಿದ್ದ ಅಪಾಯಕಾರಿ ಕಂಬವನ್ನು ತೆರವುಗೊಳಿಸಿ ಹೊಸ ಕಂಬವನ್ನು ನೆಟ್ಟಿದ್ದಾರೆ. ಇದರಿಂದ ನಮ್ಮ ಗ್ರಾಮಸ್ಥರ ದೊಡ್ಡ ಆತಂಕ ದೂರಾಗಿದೆ ಎಂದು ದೊಡ್ಡಸಿದ್ದವ್ವನಹಳ್ಳಿ ಗ್ರಾಮಸ್ಥರು ಸಂತೋಷ ಹಂಚಿಕೊಂಡಿದ್ದಾರೆ. ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ, ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಮಾಡಿದ ‘ಸುದ್ದಿಒನ್’ ವಾಹಿನಿಗೆ ಗ್ರಾಮಸ್ಥರು ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now