Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೆಚ್ ಡಿ ಕುಮಾರಸ್ವಾಮಿ ಅವರ ಮಾತಿಗೆ ಬೇಸರ ಮಾಡಿಕೊಂಡ ಸುಧಾಕರ್ ಪುತ್ರ

---Advertisement---

ಚಿತ್ರದುರ್ಗ: ಸಚಿವ ಡಿ ಸುಧಾಕರ್ ಅವರ ಆರೋಗ್ಯ ಸ್ಥಿತಿ ಚೆನ್ನಾಗಿಲ್ಲ. ಶ್ವಾಸಕೋಶದ ಸಮಸ್ಯೆಯಿಂದ ಅವರ ಆರೋಗ್ಯ ತೀವ್ರ ಹದಗೆಟ್ಟಿದೆ. ಇದರ‌ ನಡುವೆ ಕುಮಾರಸ್ವಾಮಿ ಅವರು ಒಂದು ಮಾತು ಹೇಳಿದ್ದರು. ಸುಧಾಕರ್ ಅವರ ಆರೋಗ್ಯದ ವಿಚಾರದಲ್ಲಿ ಎಲ್ಲವನ್ನು ಮುಚ್ಚಿಡಲಾಗುತ್ತಿದೆ. ಹೆಬ್ಬೆಟ್ಟು ಒತ್ತಿಸಿಕೊಳ್ಳುವುದಕ್ಕೆ ಎಂದಿದ್ದರು. ಈ ಬಗ್ಗೆ ಸಚಿವ ಸುಧಾಕರ್ ಅವರ ಪುತ್ರ ಬೇಸರ ಮಾಡಿಕೊಂಡಿದ್ದಾರೆ.

ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಸುಧಾಕರ್ ಅವರ ಪುತ್ರ ಸುಹಾಸ್ ಸುಧಾಕರ್, ಹೆಬ್ಬೆಟ್ಟು ಬಳಕೆ ಬಗ್ಗೆ ಹೆಚ್ಡಿಕೆ ಹೇಳಿಕೆ ತುಂಬಾ ನೋವಾಗಿದೆ. ನಮ್ಮ ತಂದೆಯ ಅನಾರೋಗ್ಯ ವಿಚಾರ ರಾಜಕೀಯಕ್ಕೆ ಬಳಕೆಯಾಗುತ್ತಿದೆ. ರಾಜಕೀಯ ಜಿದ್ದಾಜಿದ್ದಿಗೆ ಬಳಸಿಕೊಂಡಿದ್ದು, ತುಂಬಾ ನೋವಾಗಿದೆ. ನಮ್ಮ ತಂದೆ ಚಿಕಿತ್ಸೆಗೆ ಸ್ಪಂದಿಸ್ತಾನಿದ್ದಾರೆ. ಬೇಗ ಗುಣಮುಖರಾಗಿ ಬರುವ ನಂಬಿಕೆ ಇದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಮಂತ್ರಿಗಳು ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಬೇಗ ಗುಣಮುಖರಾಗಲಿ ಎಂದಿದ್ದಾರೆ ಸುಹಾಸ್.

ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಇತ್ತೀಚೆಗೆ ಚಿತ್ರದುರ್ಗದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ಸುಧಾಕರ್ ಅವರ ಆರೋಗ್ಯದ ಮಾತನ್ನಾಡಿದ್ದರು. ಸುಧಾಕರ್ ಅವರು ಸಾವು ಬದುಕಿನ ನಡುವೆ ಹೋರಾಟ ಮಾಡ್ತಾ ಇದ್ದಾರೆ. ಆದರೆ ಆಸ್ಪತ್ರೆಯ ಒಳಗೆ ಏನು ನಡೆಯುತ್ತಿದೆ ಎಂಬುದನ್ನು ನೋಡಬೇಕಿದೆ. ಆ ವ್ಯಕ್ತಿ ಎಷ್ಟು ನೋವನ್ನ ಅನುಭವಿಸ್ತಿದ್ದಾನೋ ಏನೋ ಯಾವ ಕಟರಣಕ್ಕೆ ಕೆಲವೊಂದು ವಿಚಾರಗಳನ್ನ ಮುಚ್ಚಿಟ್ಟಿದ್ದಾರೆ ಎಂಬುದನ್ನ ಅರಿಯಬೇಕಿದೆ. ಆ ವ್ಯಕ್ತಿಯಿಂದ ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಮುಚ್ಚಿಡಲಾಗಿದೆಯೇ..? ಎಂಬ ವಿಚಾರಕ್ಕೆ ಕುಮಾರಸ್ವಾಮಿ ಅವರು ಅನುಮಾನ ವ್ಯಕ್ತಪಡಿಸಿದ್ದರು. ಈ ವಿಚಾರಕ್ಕೆ ಅವರ ಮಗ ಬೇಸರ ಮಾಡಿಕೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now