Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುಹಾಸ್ ಶೆಟ್ಟಿಕೊಲೆ ಪ್ರಕರಣ ; ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಜಗದೀಶ್ ಶೆಟ್ಟರ್

---Advertisement---

ಹುಬ್ಬಳ್ಳಿ; ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ರಾಜ್ಯಾದ್ಯಂತ ಶಾಕ್ ಆಗಿದೆ. ಈ ಸಂಬಂಧ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ರೀತಿ ಕೊಲೆಗಳು ಹೆಚ್ಚಾಗುತ್ತಿವೆ ಎಂದಿದ್ದಾರೆ.

 

ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ದುರ್ದೈವ ದ ಸಂಗತಿ. ಸುಹಾಸ್ ಶೆಟ್ಟಿ ಕೊಲೆಯನ್ನ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಸುಹಾಸ್ ಶೆಟ್ಟಿ ಕೊಲೆಯೇ ಇದಕ್ಕೆ ಉದಾಹರಣೆ. ಇಷ್ಟೆಲ್ಲ ಘಟನೆಯಾದ ಬಳಿಕವೂ ಸರ್ಕಾರ ಕಠಿಣ ಕ್ರಮವನ್ನು ತೆಗೆದುಕೊಂಡಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಆಡಳಿತ ವ್ಯವಸ್ಥೆ ಹಾಳಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣವಾಗಿ ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ತುಷ್ಠಿಕರಣಕ್ಕೆ ಯಾವುದೇ ಮಟ್ಟಕ್ಕೆ ಹೋಗಲು ತಯಾರಿದ್ದಾರೆ. ಮುಸ್ಲಿಂ ತುಷ್ಟಿಕರಣ ಹೆಚ್ಚಾದ ಕಾರಣದಿಂದಾನೇ ಇಂದು ಹಾಡ ಹಗಲೇ ಕೊಲೆಗಳು ಹೆಚ್ಚಾಗಿರುವುದು.

ಹೀಗಾಗಿಯೇ ರಾಜ್ಯದಲ್ಲಿ ಇಂದು ಏನೇ ಮಾಡಿದರು ಏನು ಮಾಡಲು ಸಾಧ್ಯವಿಲ್ಲ ಎಂಬ ಗಟ್ಟಿ ಧೈರ್ಯ ಮುಸ್ಲಿಮರಿಗೆ. ಶಿವಮೊಗ್ಗದಲ್ಲೂ ಕೆಲವು ಕಡೆ ಹಾಕಿದ ಕೇಸ್ ಗಳನ್ನ ವಾಪಸ್ ಪಡೆದಿದ್ದಾರೆ. ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಅಟ್ಯಾಕ್ ಆದ ಪ್ರಕರಣವನ್ನು ಹಿಂತೆಗೆದುಕೊಂಡಿದ್ದಾರೆ. ಇನ್ನು ಮುಂತಾದ ಕಡೆಗಳಲ್ಲಿ ಹಲವು ಕೇಸ್ ಕೇಸ್ ಗಳನ್ನ ತೆಗೆದುಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಅಂತಾರೆ. ಇದರಿಂದ ಮುಸ್ಲಿಂ ಸಮುದಾಯಕ್ಕೆ ಇನ್ನಷ್ಟು ಸಪೋರ್ಟ್ ಸಿಕ್ಕಂತೆ ಆಗಿದೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment