Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖ್ ಪ್ರಮಾಣ ವಚನ ಸ್ವೀಕಾರ

Facebook
Twitter
Telegram
WhatsApp

 

 

 

ನವದೆಹಲಿ:  ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖ್ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ಸಿಎಂ ಆಗಿ ಸುಖ್ವಿಂದರ್ ಸಿಂಗ್ ಮತ್ತು ಉಪ ಮುಖ್ಯಮಂತ್ರಿಯಾಗಿ ಅಗ್ನಿ ಹೋತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಅದ್ಧೂರಿಯಾಗಿ ನಡೆಯಿತು.

ಹಿಮಾಚಲದ ರಾಜಧಾನಿ ಶಿಮ್ಲಾದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂತಾದವರು ಭಾಗವಹಿಸಿದ್ದರು.

ಹೊಸದಾಗಿ ಆಯ್ಕೆಯಾದ ನಾಯಕರು ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ವೇದಿಕೆಯ ಮೇಲೆ ಹಿಮಾಚಲ ಪ್ರದೇಶವನ್ನು ಆರು ಬಾರಿ ಆಳಿದ ರಾಜವಂಶಸ್ಥ ದಿವಂಗತ ವೀರಭದ್ರ ಸಿಂಗ್ ಅವರಿಗೆ ಎಲ್ಲಾ ನಾಯಕರು ಗೌರವ ಸಲ್ಲಿಸಿದರು.

ಹಿಮಾಚಲ ಪ್ರದೇಶದ ಸಿಎಂ ಹುದ್ದೆಗೆ ಹಲವು ಪ್ರಯತ್ನಗಳು ನಡೆದಿದ್ದರೂ ಒಬ್ಬರನ್ನು ಆಯ್ಕೆ ಮಾಡುವುದು ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಕೊನೆಗೂ ಆಯ್ಕೆ ಕಸರತ್ತು ಅಂತ್ಯಗೊಳಿಸಿ ಕಾಂಗ್ರೆಸ್ ನಾಯಕತ್ವ ಶನಿವಾರ ಸುಖ್ವಿಂದರ್ ಸಿಂಗ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿತು.

ಇದೇ ವೇಳೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸುಖ್ವಿಂದರ್ ಸಿಂಗ್ ಅವರು ಬಸ್ ಚಾಲಕನ ಮಗ. ಅವರು ತಮ್ಮ ರಾಜಕೀಯ ವೃತ್ತಿಜೀವನವನ್ನು ಶಿಮ್ಲಾದ ಹಿಮಾಚಲ ಪ್ರದೇಶ ವಿಶ್ವವಿದ್ಯಾಲಯದ ಕ್ಯಾಂಪಸ್‌ನಿಂದ ಪ್ರಾರಂಭಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!