ಹಿಮಾಚಲ ಪ್ರದೇಶ: ಹಿಮಾಚಲಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಜಯಬೇರಿ ಬಾರಿಸಿದೆ. ಡಿಸೆಂಬರ್ 8ರಂದೇ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದರು ಸಹ ಕಾಂಗ್ರೆಸ್ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಿರಲಿಲ್ಲ. ಇದೀಗ ಸಿಎಂ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿದೆ.
ಸುಖ್ವಿಂದರ್ ಸಿಂಗ್ ಸಿಖು ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗಿದೆ. ಹಲವು ಗೊಂದಲಗಳ ನಡುವೆ ಹೈಕಮಾಂಡ್ ಜೊತೆಗೆ ಚರ್ಚಿಸಿದ ಬಳಿಕ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಲು ತೀರ್ಮಾನಿಸಲಾಗಿದೆ. ಸುಖ್ವಿಂದರ್ ಸಿಂಗ್ ಅವರ ಹೆಸರನ್ನು ಘೋಷಿಸಲು ನಿರ್ಧಾರ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸ್ಥಾನಕ್ಕೆ ಡಿಮ್ಯಾಂಡ್ ಇತ್ತು ರಾಜ್ಯ ಅಧ್ಯಕ್ಷೆಯಾಗಿರುವ ಪ್ರತಿಭಾ ಸಿಂಗ್ ಅವರು ಮುಖ್ಯಮಂತ್ರಿ ಪಟ್ಟ ಏರುತ್ತಾರೆ ಎಂಬ ಮಾತಿತ್ತು. ಆದರೆ ಕಾಂಗ್ರೆಸ್ ಸುಖ್ವಿಂದರ್ ಸಿಂಗ್ ಅವರನ್ನು ಆಯ್ಕೆ ಮಾಡಿದೆ. ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ 40, ಬಿಜೆಪಿ 25, ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳನ್ನು ಗಳಿಸಿದ್ದರು.