Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಶ್ ಆಕ್ರೋಶ! ಏಕೆ ಗೊತ್ತೆ ?

---Advertisement---

ಆನ್‌ಲೈನ್ ಫುಡ್ ಡೆಲಿವರಿ ಸೇವೆಗಳಲ್ಲಿ ಡೆಲಿವರಿ ಚಾರ್ಜ್, ಪ್ಯಾಕಿಂಗ್ ಶುಲ್ಕ, ಪ್ಲಾಟ್‌ಫಾರ್ಮ್ ಫೀ ಮತ್ತು ಜಿಎಸ್‌ಟಿ ಸೇರಿದಂತೆ ಹಲವು ಹೆಚ್ಚುವರಿ ಶುಲ್ಕಗಳನ್ನು ಸೇರಿಸುವುದು ಸಾಮಾನ್ಯವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಹೆಚ್ಚುವರಿ ಶುಲ್ಕಗಳು ಆಹಾರದ ಮೂಲ ಬೆಲೆಯನ್ನೇ ಮೀರಿ ಹೋಗುತ್ತಿರುವುದು ಗ್ರಾಹಕರ ಅಸಮಾಧಾನಕ್ಕೆ ಕಾರಣವಾಗಿದೆ.

ಇದೇ ಅನುಭವವನ್ನು ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೂಡ ಎದುರಾಗಿದೆ. ಅವರು ಸ್ವಿಗ್ಗಿ ಮೂಲಕ ರಾಮೇಶ್ವರಂ ಕೆಫೆಯಿಂದ ಪೊಂಗಲ್ ಆರ್ಡರ್ ಮಾಡಿದ್ದು, ಅದರ ಮೂಲ ಬೆಲೆ 115 ರೂ. ಮಾತ್ರವಾಗಿದ್ದರೂ, ವಿವಿಧ ಶುಲ್ಕಗಳನ್ನು ಸೇರಿಸಿ ಒಟ್ಟು 273 ರೂ. ವಸೂಲಿ ಮಾಡಲಾಗಿದೆ. ಅಂದರೆ, 115 ರೂ. ಬೆಲೆಯ ಆಹಾರಕ್ಕೆ 158 ರೂ. ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ.ಈ ಕುರಿತು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿ, “115 ರೂಪಾಯಿಯ ಪೊಂಗಲ್‌ಗೆ 273 ರೂಪಾಯಿ ಯಾಕೆ? ಆಹಾರದ ಬೆಲೆಯಿಗಿಂತ ಡಬಲ್ ಚಾರ್ಜ್ ಮಾಡುವುದು ಸರಿಯೇ?” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ, ಗ್ರಾಹಕರಿಗೆ ಸ್ಪಷ್ಟ ಮತ್ತು ಪಾರದರ್ಶಕ ಬೆಲೆ ಮಾಹಿತಿ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

https://x.com/i/status/2037331630852104702

ಸುಮಲತಾ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಅನೇಕರು ತಮ್ಮದೇ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಹಲವರು ಇದೇ ರೀತಿಯ ಸಮಸ್ಯೆಗಳನ್ನು ಎದುರಿಸಿರುವುದಾಗಿ ಹೇಳಿಕೊಂಡು, ಫುಡ್ ಡೆಲಿವರಿ ಕಂಪನಿಗಳು ಪಾರದರ್ಶಕ ದರ ವ್ಯವಸ್ಥೆಯನ್ನು ಅನುಸರಿಸಬೇಕು ಎಂದು ಒತ್ತಾಯಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...