ನವದೆಹಲಿ: ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ರಾಜ್ಯಾದ್ಯಂತ ಬರ ತಾಂಡವವಾಡುತ್ತಿದೆ. ಬರದ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಪರಿಹಾರ ಸಿಕ್ಕಿಲ್ಲ. ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಕೇಂದ್ರಕ್ಕೆ ಮನವಿ ಮಾಡುವ ಅನಿವಾರ್ಯತೆ ಇತ್ತು.
ಇಂದು ಲೋಕಸಭೆಯಲ್ಲಿ ಸಂಸದೆ ಸುಮಲತಾ ಬರ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಿ ಮೋದಿಯವರ ಗಮನ ಸೆಳೆಯುವುದರತ್ತ ಪ್ರಯತ್ನ ಮಾಡಿದ್ದರು. 2023ರಲ್ಲಿ ಇಂದೆಂದೂ ಕಾಣದ ಉಷ್ಣತೆ ಹೆಚ್ಚಾಗಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಮಾನ್ಸೂನ್ ಕ್ಷೀಣಿಸಿದೆ. ಇದರ ಪರಿಣಾಮ ರಾಜ್ಯದ 223 ತಾಲೂಕುಗಳು ಬರ ಪೀಡಿತವಾಗಿವೆ. ಅಂದಾಜು 30 ಸಾವಿರ ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ. ಹೀಗಾಗಿ ಕರ್ನಾಟಕದ ರೈತರಿಗೆ ನೆರವಾಗಬೇಕು. ಮಂಡ್ಯದ ಎಲ್ಲಾ ತಾಲೂಕುಗಳನ್ನು ಬರ ಪೀಡಿತವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. 60ರಿಂದ 70 ಪರ್ಸೆಂಟ್ ಬೆಳೆ ನಾಶವಾಗಿದೆ. ಕಬ್ಬು ಬೆಳೆಗಾರರಿಗೆ ಬೆಳೆ ವಿಮೆ ಲಭ್ಯವಾಗಿಲ್ಲ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟದ ರೈತರ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದ್ದರು.
ಬರದ ಬಗ್ಗೆ ಧ್ವನಿ ಎತ್ತಿದವರಲ್ಲಿ ಸುಮಲತಾ ಮೊದಲಿಗರು. ಆದರೆ ಬಿಜೆಪಿಯ ಇನ್ನೊಬ್ಬ ಸಂಸದ ಇದೇ ಶೂನ್ಯವೇಳೆಯಲ್ಲಿ ಜಾತಿ ಮೀಸಲಾತಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಲಬುರಗಿ ಬಿಜೆಪಿ ಸಂಸದ ಜಾತಿ ಮೀಸಲಾತಿ ಬಗ್ಗೆ ಮಾತನಾಡಿದ್ದಾರೆ. ಲೋಕಸಭೆಯ ಶೂನ್ಯವೇಳೆಯಲ್ಲಿ ವೇಳೆಯಲ್ಲಿ ಮಾತನಾಡಿದ ಉಮೇಶ್ ಜಾಧವ್, ಕೋಲಿ, ಕಬ್ಬಲಿಗ, ಗಂಗಾಮತಸ್ಥ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕೆಂದು ಮನವಿ ಮಾಡಿದರು.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…