ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ ಗಮನ ಸೆಳೆದಿದೆ.
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆಲುವು ಕಂಡಿದ್ದ ಸುಮಲತಾ ಬಿಜೆಪಿ ಸೇರಿದ ಮೇಲೆ ಟಿಕೆಟ್ ಸಿಗಲಿಲ್ಲ. ಯಾರನ್ನು ವಿರೋಧಿಗಳು ಎಂದುಕೊಂಡಿದ್ದರೋ ಅವರೇ ಸ್ಪರ್ಧೆಗೆ ನಿಂತಿದ್ದಾರೆ. ಹೀಗಾಗಿ ಸುಮಲತಾಗೆ ಮನಸ್ಸಲ್ಲೆ ಬೇಸರವಿದೆ. ಕುಮಾರಸ್ವಾಮಿ ಅವರ ಪರ ಪ್ರಚಾರಕ್ಕೂ ಕೂಡ ಹೋಗಿಲ್ಲ.
ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರು ಸಹ ಸುಮಲತಾಗೆ ಸಪೋರ್ಟ್ ಮಾಡಿದ್ದರು. ದರ್ಶನ್ ಹಾಗೂ ಯಶ್ ಪ್ರಚಾರವೇ ದೊಡ್ಡ ಶಕ್ತಿಯಾಗಿತ್ತು. ಆದರೆ ಈ ಬಾರಿ ದರ್ಶನ್ ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರ ಮಾಡಿದ್ದಾರೆ. ಬಿಜೆಪಿಯ ನಾಯಕರು ಅಷ್ಟಾಗಿ ಬೆಂಬಲ ನೀಡಿಲ್ಲ. ಇದರ ನಡುವೆ ಸುನಲತಾ ಮಾಡಿರುವ ಟ್ವೀಟ್ ಒಂದು ಗಮನ ಸೆಳೆಯುತ್ತಿದೆ. ಅದಕ್ಕೆ ತರಹೇವಾರಿ ಕಮೆಂಟ್ ಗಳು ಬರುತ್ತಿವೆ.
‘ಏನು ಹೇಳಬೇಕೆನ್ನುವುದು ಜ್ಞಾನ,
ಹೇಗೆ ಹೇಳಬೇಕೆನ್ನುವುದು ವ್ಯಕ್ತಿತ್ವ,
ಎಷ್ಟು ಹೇಳಬೇಕೆನ್ನುವುದು ಕೌಶಲ್ಯ,
ಹೇಳಬೇಕೋ ಬೇಡವೋ ಎನ್ನುವುದು ವಿವೇಕ’
ಎಂದು ಸುಮಲತಾ ಟ್ವೀಟ್ ಮಾಡಿದ್ದಾರೆ. ಇದಕ್ಕೆ ನೆಟ್ಟಿಗರು, ಅಕ್ಕ ನಿನ್ನ ವೋಟು ತಮ್ಮನಿಗೋ, ಸ್ಟಾರ್ ಗೋ ಎಂದು ಪ್ರಶ್ನಿಸಿದ್ದಾರೆ. ಇನ್ನು ಹಲವರು ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಹೇಳಿದ್ದಾರೆ. ಗಂಡನ ಪಾರ್ಟಿ ಬಿಟ್ಟು ಕೋಮುವಾದಿ ಪಾರ್ಟಿ ಸೇರಿದವರು ಅವಿವೇಕಿ ಅಂತೆಲ್ಲಾ ಕಮೆಂಟ್ ಗಳನ್ನು ಹಾಕುತ್ತಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…