ಮಂಡ್ಯದಿಂದ ಸುಮಲತಾ ಸ್ಪರ್ಧೆ : ಅಡ್ಡಗೋಡೆ ಮೇಲೆ ದೀಪವಿಟ್ಟರಾ ಆರ್ ಅಶೋಕ್..?

suddionenews
1 Min Read

ಬೆಂಗಳೂರು: ಲೋಕಸಭಾ ಚುನಾವಣೆ ಸನಿಹವಾಗುತ್ತಿರುವ ಕಾರಣ ಎಲ್ಲಾ ರೀತಿಯಲ್ಲೂ ತಯಾರಿ ನಡೆದಿದೆ. ಅದರಲ್ಲೂ ಈ ಬಾರಿ ಕರ್ನಾಟಕದಲ್ಲೂ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಪ್ರಯತ್ನ ಪಡುತ್ತಿದ್ದಾರೆ. ಶತಾಯಗತಾಯ ಕಾಂಗ್ರೆಸ್ ಸೋಲಿಸುವುದಕ್ಕೆ ಪ್ರಯತ್ನ ಪಡುತ್ತಿರುವ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಈ ಎಲ್ಲಾ ವಿಚಾರಗಳಿಗೆ ಸಂಬಂಧಪಟ್ಟಂತೆ ಇಂದು ವಿಪಕ್ಷ ನಾಯಕ ಆರ್ ಅಶೋಕ್ ಸುದ್ದಿಗೋಷ್ಟಿ ನಡೆಸಿ ಹಲವು ವಿಚಾರಗಳನ್ನು ಮಾತನಾಡಿದ್ದಾರೆ.

 

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಸೀಟು ಹಂಚಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಸದ್ಯಕ್ಕೆ ಆರೋಗ್ಯ ಸರಿ ಇಲ್ಲ. ಇನ್ನೊಂದು ಎರಡು ಮೂರು ದಿನಗಳ ಬಳಿಕ ದೆಹಲಿಗೆ ಹೋಗಲಿದ್ದಾರೆ. ಹೈಕಮಾಂಡ್ ನಾಯಕರ ಜೊತೆಗೆ ಸೀಟು ಹಂಚಿಕೆ ಬಗ್ಗೆ ಕುಮಾರಸ್ವಾಮಿ ಅವರು ಚರ್ಚೆ ಮಾಡಲಿದ್ದಾರೆ. ಈಗಾಗಲೇ ಮಾತುಕತೆ ನಡೆಸಿದ್ದು, ಅಂತಿಮ ತೀರ್ಮಾನವಷ್ಟೇ ಮಾಡಬೇಕು ಎಂದಿದ್ದಾರೆ.

 

ಇನ್ನು ಇದೇ ವೇಳೆ ಮಂಡ್ಯ ಕ್ಷೇತ್ರ ಹಾಗೂ ಸುಮಲತಾ ಸ್ಪರ್ಧೆ ಬಗೆಗಿನ ಪ್ರಶ್ನೆಗೆ ಉತ್ತರಿಸಿದ್ದು, ಸುಮಲತಾ ಅವರು ಲೋಕಸಭಾ ಚುನಾವಣೆಯಲ್ಲಿ ಗೆದ್ದ ಆರು ತಿಂಗಳ ಒಳಗೆ ಬಿಜೆಪಿ ಪಕ್ಷಕ್ಕೆ ಸೇರಬೇಕಿತ್ತು. ಆದರೆ ಅವರು ಕಳೆದ ವರ್ಷವಷ್ಟೇ ಬಿಜೆಪಿಗೆ ಸೇರಿದ್ದಾರೆ. ಅವರಿಗೆ ಟಿಕೆಟ್ ಸಿಗುವ ಬಗ್ಗೆ ನನಗೆ ಗೊತ್ತಿಲ್ಲ. ವರಿಷ್ಠರು ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರಿಷ್ಠರು ಏನೇ ತೀರ್ಮಾನ ತೆಗೆದುಕೊಂಡರು ಅದಕ್ಕೆ ನಾವೂ ಬದ್ಧರಾಗಿರುತ್ತೇವೆ. ಮಂಡ್ಯದಲ್ಲಿ ಬಿಜೆಪಿಯ ವೋಟ್ ಬೇಸ್ ಹೆಚ್ಚಾಗಿದೆ. ಪ್ರತಿ ಚುನಾವಣೆಯಲ್ಲೂ ಪಕ್ಷದ ವೋಟ್ ಶೇರ್ ಹೆಚ್ಚುತ್ತಿರುತ್ತದೆ. ಹೀಗಾಗಿ ಜೆಡಿಎಸ್ ವೋಟ್ ಕೂಡ ಈ ಬಾರಿ ಸೇರಿಕೊಂಡರೆ ಬಿಜೆಪಿ ಅಥವಾ ಎನ್ಡಿಎ ಅಭ್ಯರ್ಥಿ ಗೆಲ್ಲುವುದು ಖಚಿತ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *