ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಮಂಡ್ಯ ಕ್ಷೇತ್ರದಿಂದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಸುಮಲತಾಗೆ ಭಾರೀ ನಿರಾಸೆಯಾಗಿದೆ. ಇದೀಗ ಸ್ಪರ್ಧೆಯ ಬಗ್ಗೆ ನಿರ್ಧಾರ ಹೇಳಲು ನಾಳೆ ಮಂಡ್ಯ ಕ್ಷೇತ್ರಕ್ಕೆ ಬರುತ್ತಿದ್ದಾರೆ.
‘ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ,
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.
ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ.
ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ.
ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ ಎಂದು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್