Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಐಶ್ವರ್ಯಾ ಗೌಡ ಕೇಸ್ ಸಂಬಂಧ ಡಿಕೆ ಸುರೇಶ್ ಗೆ ಸಮನ್ಸ್..!

---Advertisement---

ಬೆಂಗಳೂರು; ಕಳೆದ ಕೆಲವು ದಿನಗಳ ಹಿಂದಷ್ಟೇ ಐಶ್ಚರ್ಯಾ ಗೌಡ ತಗಲಾಕಿಕೊಂಡಿದ್ರು. ಪೊಲೀಸರ ಅತಿಥಿಯಾಗಿದ್ರು. ಆಗ ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಸರನ್ನು ಹೇಳಿದ್ರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಡಿಕೆ ಸುರೇಶ್ ಅವರ ಸಹೋದರಿ ಅಂತ ಹೇಳಿಕೊಂಡು ಐಶ್ವರ್ಯಾ ಗೌಡ ದೊಡ್ಡ ಮಟ್ಟಕ್ಕೆ ವಂಚನೆ ಮಾಡಿದ್ದರು.

ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಐಶ್ವರ್ಯಾ ಗೌಡ ವಂಚನೆ ಮಾಡಿದ್ದರು. ಇದೀಗ ಆ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ‌. ಗುರುವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ತಿಳಿಸಿದೆ. ಐಶ್ವರ್ಯಾ ಗೌಡ ಜೊತೆಗೆ ಆರ್ಥಿಕ ವ್ಯವಹಾರಗಳ ಅನುಮಾನದ ಹಿನ್ನೆಲೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಈ ನೋಟೀಸ್ ಬಗ್ಗೆ ಮಾತನಾಡಿರುವ ಡಿಕೆ ಸುರೇಶ್, ಮಂಗಳವಾರ ಮಧ್ಯಾಹ್ನ 12.30ಕ್ಕೆ ನಾನು ಹೊರಗೆ ಹೋಗಿದ್ದೆ. ಈ ವೇಳೆ ಇಡಿ ಅಧಿಕಾರಿಗಳು ಬಂದಿದ್ದಾರೆ. ಬಳಿಕ ನಾನು ಅವರನ್ನು ಮನೆಯಲ್ಲಿ ಭೇಟಿ ಮಾಡಿದಾಗ, ಇಡಿ ಸಮನ್ಸ್ ಅಂದ್ರು. ಯಾವ ವಿಚಾರವಾಗಿ ಅಂತ ನೋಡಿದ್ರೆ ಐಶ್ವರ್ಯಾ ಗೌಡ ಕೇಸ್ ಎಂದು ಗೊತ್ತಾಯ್ತು. ಜೂನ್ 19ಕ್ಕೆ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ. ಆದರೆ ಅವತ್ತು, ಪೂರ್ವನಿಶ್ಚುತ ಕಾರ್ಯಕ್ರಮ ಇದೆ. ಹಾಗಾಗಿ ಹಾಜರಾಗುವುದಕ್ಕೆ ಸಾಧ್ಯವಿಲ್ಲ ಎಂದಿದ್ದೇನೆ. ಅದಕ್ಕೆ ಲಿಖಿತ ರೂಪದಲ್ಲಿ ಕೊಡಲು ಹೇಳಿದ್ದಾರೆ ಎಂದು ಐಶ್ವರ್ಯಾ ಗೌಡ ಕೇಸ್ ಗೆ ಸಂಬಂಧಿಸಿದಂತೆ ಉತ್ತರ ನೀಡಿದ್ದಾರೆ. ಐಶ್ವರ್ಯಾ ಗೌಡ, ಡಿಕೆ ಸುರೇಶ್ ಅವರನ್ನ ಅಣ್ಣ ಎಂದು ಹೇಳಿಕೊಂಡು ಮೋಸ ಮಾಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment