Connect with us

Hi, what are you looking for?

ಪ್ರಮುಖ ಸುದ್ದಿ

ಮನಸಾರೆ’ ಸೀರಿಯಲ್ ನಿಂದ ಸುನಿಲ್ ಪುರಾಣಿಕ್ ಹೊರಕ್ಕೆ…? ಅಸಲಿ ಕಾರಣವೇನು…?

ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಜನ ಮೆಚ್ಚಿದ ಧಾರಾವಾಹಿ ಮನಸಾರೆಯ ಪ್ರಮುಖ ಪಾತ್ರಧಾರಿ , ಸೀರಿಯಲ್ ನ ನಾಯಕಿ ಪ್ರಾರ್ಥನಾ ಅಪ್ಪ ಆನಂದ್ ಮಹೇಂದ್ರ ಪಾತ್ರದಲ್ಲಿ ನಟಿಸುತ್ತಿದ್ದ ನಟ ಕಂ ನಿರ್ದೇಶಕ ಸುನಿಲ್ ಪುರಾಣಿಕ್ ಇದೀಗ ಸೀರಿಯಲ್ನಿಂದ ಹೊರನಡೆದಿದ್ದಾರೆ ಎನ್ನಲಾಗಿದೆ.


ಒಂದೂವರೆ ವರ್ಷಗಳ ನಂತರದಲ್ಲಿ ಮನಸಾರೆ ಸೀರಿಯಲ್ ಮೂಲಕ ಸುನಿಲ್ ಪುರಾಣಿಕ್ ಧಾರಾವಾಹಿ ಜಗತ್ತಿಗೆ ಕಂಬ್ಯಾಕ್ ಮಾಡಿದ್ದರು. ಈ ಸೀರಿಯಲ್ ಜೊತೆಗೆ ಸಿನಿಮಾ ಕೂಡ ಮಾಡುತ್ತಿದ್ದಾರೆ. ಹೀಗಾಗಿ ಡೇಟ್ ಸಮಸ್ಯೆಯಿಂದಾಗಿ ಸುನಿಲ್ ಧಾರಾವಾಹಿಯಿಂದ ಹೊರನಡೆದಿದ್ದಾರೆ ಎನ್ನಲಾಗಿದೆ. ಅದಿತಿ ಪ್ರಭುದೇವ ನಟನೆಯ ‘ಆನ’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ ಸುನಿಲ್ ಪುರಾಣಿಕ್.


ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿಯೂ ಕೆಲಸ ಮಾಡುತ್ತಿರುವ ಸುನಿಲ್ ಪುರಾಣಿಕ್ , ಅವರಿಗೆ ಶೂಟಿಂಗ್ನಲ್ಲಿ ಭಾಗಿಯಾಗೋದು ಸ್ವಲ್ಪ ಸಮಸ್ಯೆಯಾಗುತ್ತಿದೆ ಎನ್ನಲಾಗ್ತಿದೆ. ಸದ್ಯ ಮಹೇಂದ್ರ ಪಾತ್ರದಿಂದ ಸುನಿಲ್ ಪೌರಾಣಿಕ್ ಹೊರ ನಡೆದಿರೋದ್ರಿಂದ ಆ ಜಾಗಕ್ಕೆ ಯಾರು ಬರಲಿದ್ದಾರೆ ಎಂದು ಕಾದು ನೋಡಬೇಕಿದೆ. ಮನಸಾರೆ ಧಾರಾವಾಹಿ ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದೆ.

ಅಪ್ಪನ ಆಶೀರ್ವಾದ ಪಡೆದು ಪ್ರಿಯಕರ ಯುವರಾಜ್ ಜೊತೆ ಪ್ರಾರ್ಥನಾ ಸಪ್ತಪದಿ ತುಳಿಯಲಿದ್ದಾಳೆ. ಇನ್ನು ಮುಂದಿನ ದಿನಗಳಲ್ಲಿ ಯಾವ ರೀತಿ ಟ್ವಿಸ್ಟ್ ಎದುರಾಗಲಿದೆ ಎಂದು ಕಾದು ನೋಡಬೇಕಿದೆ. ಪ್ರಾರ್ಥನಾಳನ್ನು ಮಗಳು ಅಂತಾನೇ ಒಪ್ಪದ ಅವಳ ತಂದೆ ಆನಂದ್ ಧಾರೆ ಎರೆಯುತ್ತಿದ್ದಾನೆ ಅಂತ ಆಶ್ವರ್ಯ ಆಗ್ತಿದ್ಯಾ? ನಿಜಕ್ಕೂ ಈ ಮದುವೆ ನಡೆಯುತ್ತಾ ಅನ್ನೋ ಅನುಮಾನವಿದ್ಯಾ? ಇದಕ್ಕೆಲ್ಲ ಉತ್ತರ ಕಂಡುಕೊಳ್ಳಲು ‘ಮನಸಾರೆ’ ನೋಡಬೇಕಿದೆ.

ಅಪ್ಪನ ಪ್ರೀತಿಗಾಗಿ ಹಂಬಲಿಸುವ ಮಗಳು ಪ್ರಾರ್ಥನಾ, ಸೌತಿಯ ಮಗಳನ್ನು ಸ್ವಂತ ಮಗಳಂತೆ ಕಾಣುವ ತಾಯಿ, ಸ್ವಂತ ಮಗಳನ್ನು ಶತ್ರುವಿನಂತೆ ದ್ವೇಷಿಸುವ ತಂದೆ, ಮಲತಾಯಿಯನ್ನು ಸ್ವಂತ ತಾಯಿಯಂತೆ ಕಾಣುವ ಮಗಳು ಪ್ರಾರ್ಥನಾ, ನಾಯಕಿಯನ್ನು ಪ್ರಾಣಕ್ಕಿಂತ ಹೆಚ್ಚು ಪ್ರೀತಿಸುವ ನಾಯಕ. ಇದರ ಸುತ್ತವೇ ‘ಮನಸಾರೆ’ ಧಾರಾವಾಹಿಯ ಕಥೆ ಸಾಗುತ್ತದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!