ಸುದ್ದಿಒನ್,ಬೆಂಗಳೂರು,ಮೇ.31 : ಮಧ್ಯಪ್ರಾಚ್ಯದಲ್ಲಿ (Middle East) ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ರಾಜ್ಯದ ಶಾಲೆಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ‘ಪಿ.ಎಂ ಪೋಷಣ್’ (ಮಧ್ಯಾಹ್ನದ ಉಪಹಾರ) ಯೋಜನೆಗೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈ ಕುರಿತು ತುರ್ತು ಸುತ್ತೋಲೆಯನ್ನು ಹೊರಡಿಸಿದ್ದು, ಶಾಲೆಗಳ ಬಿಸಿಯೂಟ ತಯಾರಿಕೆಗೆ ಅಗತ್ಯವಿರುವ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಜೂನ್ 1, 2026 ರಿಂದ ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದು, ಸರ್ಕಾರದ ಪ್ರತಿಷ್ಠಿತ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಾದ ಪಿ.ಎಂ ಪೋಷಣ್ ಯೋಜನೆಗೆ ನಿರಂತರವಾಗಿ ಎಲ್‌ಪಿಜಿ ಇಂಧನದ ಅಗತ್ಯವಿರುತ್ತದೆ. ಬಿಸಿಯೂಟ ಯೋಜನೆಗೆ ಯಾವುದೇ ತೊಂದರೆ ಎದುರಾಗದಂತೆ ನೋಡಿಕೊಳ್ಳಲು, ಎಲ್‌ಪಿಜಿ ಇಂಧನವನ್ನು ‘ಅಗತ್ಯ ವಸ್ತು ಕಾಯ್ದೆ’ (Essential Commodities Act) ಯಡಿ ಪರಿಗಣಿಸಬೇಕು ಎಂದು ಸರ್ಕಾರ ತಿಳಿಸಿದೆ.
ತಮ್ಮ ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಗ್ಯಾಸ್ ವಿತರಕರು (Distributors) ಶಾಲೆಗಳಿಗೆ ಮೊದಲ ಆದ್ಯತೆಯ ಮೇರೆಗೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ಸರಬರಾಜು ಮಾಡುವಂತೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಕೋರಲಾಗಿದೆ.
ಯೋಜನೆಯ ಸುಗಮ ನಿರ್ವಹಣೆಗಾಗಿ ಈ ಆದೇಶದ ಪ್ರತಿಗಳನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರಿಗೆ ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ (CEO) ಅಗತ್ಯ ಕ್ರಮಕ್ಕಾಗಿ ರವಾನಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















