ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ :  ರಾಘವೇಂದ್ರನಾಯ್ಕ ಮನವಿ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23 : ಸಂವಿಧಾನ ವಿರೋಧಿ ಬಿಜೆಪಿ.ಯನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿ ಬಡವರು, ದಲಿತರು, ದುರ್ಬಲರ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ರಾಘವೇಂದ್ರನಾಯ್ಕ ಜನತೆಯಲ್ಲಿ ಮನವಿ ಮಾಡಿದರು.

 

ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಬಡವರಿಗಾಗಿ ಅನೇಕ ಕಾರ್ಯಕ್ರಮಗಳನ್ನು ನೀಡಿದೆ. ತತ್ವ, ಸಿದ್ದಾಂತ, ಆದರ್ಶಗಳನ್ನಿಟ್ಟುಕೊಂಡಿರುವ ಕಾಂಗ್ರೆಸ್ ಎಲ್ಲಾ ವರ್ಗದವರ ಹಿತ ಕಾಪಾಡುತ್ತಿದೆ. ಬಿಜೆಪಿ.ಯ ಗೋವಿಂದ ಕಾರಜೋಳ ಸಂವಿಧಾನ ವಿರೋಧಿಯಾಗಿದ್ದು, ಹಾಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರನ್ನು ಗೆಲ್ಲಿಸುವಂತೆ ವಿನಂತಿಸಿದರು.

 

ಹೈಕೋರ್ಟ್ ವಕೀಲ ಅನಂತನಾಯ್ಕ ಮಾತನಾಡಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳ ಸಂವಿಧಾನಕ್ಕೆ ಅಪಮಾನ ಮಾಡುತ್ತಿದ್ದಾರೆ. ಅನಂತಕುಮಾರ್ ಹೆಗ್ಡೆ, ಶೋಭ ಕರಂದ್ಲಾಜೆ, ಸಿ.ಟಿ.ರವಿ ಇವರುಗಳು ಸಂವಿಧಾನ ವಿರೋಧಿಗಳು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಕಾಂಗ್ರೆಸ್ ಸರ್ಕಾರದ ಅನೇಕ ಕಾರ್ಯಕ್ರಮಗಳನ್ನು ನಿಲ್ಲಿಸಿದ್ದಾರೆ. ಹಾಗಾಗಿ ನಾಳೆ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡುವಂತೆ ಜನತೆಯಲ್ಲಿ ಕೋರಿದರು.

 

ಬಂಜಾರ, ಭೋವಿ, ಕೊರಚ, ಕೊರಮ, ಅಲೆಮಾರಿ ಜನಾಂಗದವರ ನಡುವೆ ಬಿಜೆಪಿ. ಭಿನ್ನಾಭಿಪ್ರಾಯ ಮೂಡಿಸುವ ಕೆಲಸ ಮಾಡುತ್ತಿದೆ. ಆಯೋಗ, ಸಮಿತಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ. ಸಂವಿಧಾನಕ್ಕೆ ಅವಮಾನ ಮಾಡಿರುವ ಗೋವಿಂದ ಕಾರಜೋಳರನ್ನು ಸೋಲಿಸಿ ಸರಳ, ಸಂಪನ್ನ ಬಿಎನ್.ಚಂದ್ರಪ್ಪನವರನ್ನು ಗೆಲ್ಲಿಸುವಂತೆ ಅನಂತನಾಯ್ಕ ಮತದಾರರಲ್ಲಿ ವಿನಂತಿಸಿದರು.
ಅಲೆಮಾರಿ ಜನಾಂಗದ ನಾಗರಾಜ, ಬಂಜಾರ ಸಮಾಜದ ಲಿಂಗಾನಾಯ್ಕ, ಅನಂತಮೂರ್ತಿನಾಯ್ಕ, ಭೋವಿ ಸಮಾಜದ ತಿಪ್ಪೇಸ್ವಾಮಿ, ದೇವರಾಜ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *